ಬ್ರೇಕಿಂಗ್ ನ್ಯೂಸ್
01-12-23 10:41 pm Bangalore Correspondent ಕ್ರೈಂ
ಬೆಂಗಳೂರು, ಡಿ.1: ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಗಳು, ನಿಮ್ಮ ಕೊರಿಯರ್ ಪಾರ್ಸೆಲ್ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದ 8 ಮಂದಿ ಸೈಬರ್ ವಂಚಕರನ್ನು ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವಾಸಿಂ, ಹಬ್ಬಿಬುಲಾ, ನಿಜಾಮುದ್ದೀನ್, ಮುಷರಫ್ ಖಾನ್, ಬೆಂಗಳೂರಿನ ನೂರುಲ್ಲಾ ಖಾನ್, ಮೊಹಮ್ಮದ್ ಉಮರ್, ಸೈಯದ್ ಅಹ್ಮದ್ ಹಾಗೂ ಸೈಯ್ಯದ್ ಹುಸೇನ್ ಬಂಧಿತರು. ಮಲ್ಲೇಶ್ವರದ ನಟರಾಜ್ ಬಿ.ಎಸ್.ರಾವ್ ಎಂಬವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, 13 ಲಕ್ಷ ಹಣ ವಶಪಡಿಸಿಕೊಂಡಿದೆ. ಅಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 19 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್, 148 ಬೇನಾಮಿ ಬ್ಯಾಂಕ್ ಖಾತೆಗಳನ್ನ ಜಪ್ತಿ ಮಾಡಲಾಗಿದೆ. ಜೊತೆಗೆ 4500 ಯುಎಸ್ ಡಾಲರ್ ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನವೆಂಬರ್ 10ರಂದು ನಟರಾಜ್ ಅವರಿಗೆ ವಾಟ್ಸ್ಆ್ಯಪ್ ಕರೆ ಮಾಡಿದ ಆರೋಪಿಗಳು ಮುಂಬೈ ಪೊಲೀಸರು ಎಂದು ತಮ್ಮನ್ನು ಪರಿಚಯಿಸಿ ತಮ್ಮ ಪತ್ನಿ ಹೆಸರಿನಲ್ಲಿ ಮುಂಬೈನಿಂದ ಥಾಯ್ಲೆಂಡ್ಗೆ ಕಳುಹಿಸುವ ಫೆಡಕ್ಸ್ ಕೊರಿಯರ್ ಪಾರ್ಸಲ್ನಲ್ಲಿ 140 ಗ್ರಾಂ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೇ ಹಲವು ಬ್ಯಾಂಕ್ ಖಾತೆಗಳನ್ನ ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ತನಿಖೆ ಮುಗಿಯುವ ವರೆಗೂ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ಒಪ್ಪಿಸಬೇಕಿದೆ. ತನಿಖೆ ಬಳಿಕ ಹಣ ನಿಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ನಂಬಿಸಿ ಒಟ್ಟು 1.08 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದರು.
ದಾವಣಗೆರೆ ಹಾಗೂ ಬೆಂಗಳೂರು ಮೂಲದ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸೈಬರ್ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಕೊರಿಯರ್ ಪಾರ್ಸಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಅಮಾಯಕರನ್ನು ಯಾಮಾರಿಸುತ್ತಿದ್ದರು. ಇವರು ಅಮಾಯಕರಿಗೆ ಹಣ ನೀಡಿ ಅವರ ಹೆಸರಿನಲ್ಲಿ ಬೇನಾಮಿ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದರು. ವರ್ಗಾಯಿಸಿಕೊಂಡಿದ್ದ 1.08 ಕೋಟಿ ಪೈಕಿ ದಾವಣಗೆರೆಯ ಆರ್.ಬಿಎಲ್ ಬ್ಯಾಂಕ್ ನಿಂದ ಆರೋಪಿಗಳು 9.34 ಲಕ್ಷ ರೂಪಾಯಿ ಹಣ ವಿತ್ ಡ್ರಾ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಂಚಕರನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
72 ಪ್ರಕರಣಗಳು ಪತ್ತೆ
ವಾಟ್ಸ್ಆ್ಯಪ್ ಆಡಿಯೋ ಕರೆ ಮಾಡಿದ ಆರೋಪಿಗಳು, ಸಾರ್ವಜನಿಕರಿಂದ ವರ್ಗಾಯಿಸಿಕೊಂಡಿದ್ದ 1.08 ಕೋಟಿ ಹಣವನ್ನು ಕೆಲವೇ ಗಂಟೆಗಳಲ್ಲಿ 72 ಬೇನಾಮಿ ಅಕೌಂಟ್ಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆರು ಗಂಟೆಗಳ ವಾಟ್ಸಾಆ್ಯಪ್ ಕರೆ ಮಾಡಿ ಪ್ರಕರಣದ ದೂರುದಾರರ ನಟರಾಜ್ ನಂಬಿಸಿ ಯಾಮಾರಿಸಿದ್ದರು. ಆರೋಪಿಗಳ ಬಂಧನದಿಂದ ರಾಷ್ಟ್ರೀಯ ಅಪರಾಧ ಸಂಗ್ರಹ ಘಟಕದಲ್ಲಿ (ಎನ್ಸಿಆರ್ಬಿ) ದಾಖಲಾಗಿದ್ದ 72 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
The Bengaluru police have arrested eight persons for their alleged involvement in the fake courier scam targeting gullible citizens by claiming that they have found narcotics or materials linked to terrorism in parcels sent in their names.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm