ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm