ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm