ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm