ಬ್ರೇಕಿಂಗ್ ನ್ಯೂಸ್
20-01-24 07:07 pm HK News Desk ಕ್ರೈಂ
ಕಲಬುರಗಿ, ಜ 20: 10 ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ಜರುಗಿದೆ.
ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಸ್ವಂತ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದು ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.
ಇತ್ತ ವಿದ್ಯಾರ್ಥಿನಿ ದಪ್ಪ ಇರೋದ್ರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಆದರೆ ಡಿಸೆಂಬರ್ 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು.
ಚಿಕತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್ ಆಗಿದ್ದಾರೆ. ಈಕೆಗೆ ಮದುವೆಯೇ ಆಗಿಲ್ಲ ಮಗುವಿಗೆ ಜನ್ಮ ಅಂದ್ರೆ ಹೇಗೆ ಅಂತಾ ಮಾತಾಡಿಕೊಳ್ಳಲು ಆರಂಭಿಸಿದರು. ಬಳಿಕ ಆಸ್ಪತ್ರೆಯವರು ಮಹಾರಾಷ್ಟ್ರದ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದರು.
ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ.
ಪ್ರಿನ್ಸಿಪಾಲ್, ವಾರ್ಡನ್ ಅಮಾನತು !
ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಿನ್ಸಿಪಾಲ್ ಮಲಕಪ್ಪ ಬಿರಾದಾರ್ ಹಾಗೂ ನಿಲಯ ಪಾಲಕ ಜಾವೇದ್ ಪಟೇಲ್ ಅವರಿಗೆ ಕರ್ತವ್ಯ ಲೋಪದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.
ಪ್ರಿನ್ಸಿಪಾಲ್ ಹಾಗೂ ನಿಲಯ ಪಾಲಕರ ಅಮಾನತು ಸಂಗತಿ ತಿಳಿಯುತ್ತಿದ್ದಂತೆಯೇ ವಸತಿ ಶಾಲೆಯ ವಿದ್ಯಾರ್ಥಿಗಳು ಶಾಲೆಯ ದ್ವಾರದ ಮುಂದೆ ಅಮಾನತು ವಿರೋಧಿಸಿ ಹಾಗೂ ಅಮಾನತುಗೊಳಿಸಿದ ಪ್ರಿನ್ಸಿಪಾಲ್ ಹಾಗೂ ನಿಲಯ ಪಾಲಕರಿಗೆ ಮರು ನಿಯುಕ್ತಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಸಂಗತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಹಸಿಲ್ದಾರ್ ಸಂಜೀವಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ನಾಯಕ್ ಅವರು ಭೇಟಿ ನೀಡಿ, ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾತನಾಡಿ, ನಮ್ಮ ವಸತಿ ಶಾಲೆಯಲ್ಲಿ ಪ್ರಿನ್ಸಿಪಾಲರು ಮತ್ತು ನಿಲಯ ಪಾಲಕರು ಬಹಳ ಒಳ್ಳೆಯವರಿದ್ದಾರೆ. ಅವರು ಏನೂ ತಪ್ಪು ಮಾಡಿಲ್ಲ. ಯಾವ ಕಾರಣಕ್ಕಾಗಿ ಅವರಿಗೆ ಅಮಾನತು ಮಾಡಿದ್ದೀರಿ ಎನ್ನುವುದನ್ನು ನಮಗೆ ತಿಳಿಸಬೇಕು. ಮೇಲಾಧಿಕಾರಿಗಳು ಸ್ಥಳಕ್ಕೆ ಬರುವ ತನಕ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಪರೀಕ್ಷೆಯನ್ನೂ ಬರೆಯುವುದಿಲ್ಲ ಎಂದು ಪಟ್ಟು ಹಿಡಿದರು.
In a shocking incident, a class 10 student gave birth to a baby boy in Kalaburagi. The incident took place in Aland taluka of the district, where the girl's own uncle's son was found guilty of the crime. The Aland police have also arrested the accused's elder brother in connection with the case.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm