ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm