ಬ್ರೇಕಿಂಗ್ ನ್ಯೂಸ್
25-01-24 10:09 pm Udupi Correspondent ಕ್ರೈಂ
ಉಡುಪಿ, ಜ 25: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ.
ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದ. ಬಳಿಕ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಬೆದರಿಸಿ, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ.
ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ಕೊಟ್ಟು ರೂಮ್ ಪಡೆದು ಅತ್ಯಾಚಾರ ಎಸಗಿದ್ದ. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದ. ವಿಡಿಯೋ ಡಿಲೀಟ್ ಮಾಡಬೇಕಾದರೆ ಹಣ ಕೊಡ್ಬೇಕು ಅಂತ ಬ್ಲಾಕ್ ಮೇಲ್ ಮಾಡ್ತಿದ್ದ. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿತ್ತು.
ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ನೊಂದ ಬಾಲಕಿಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 20ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನ ಉಡುಪಿ ನ್ಯಾಯಾಲಯ ವಿಧಿಸಿದೆ.
Udupi rape accused gets 20 years rigorous imprisonment for raping minor. Accused Shamsuddin was a auto driver by profession and has raped a minor girl by blackmailing her of her photos.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm