ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm