ಬ್ರೇಕಿಂಗ್ ನ್ಯೂಸ್
13-02-24 02:53 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಸರ್ಕಾರದಿಂದ ನಿಷೇಧಿಸಲ್ಪಟ್ಟ ತಂಬಾಕು/ನಿಕೋಟಿನ್ ಉತ್ಪನ್ನಗಳನ್ನು ಯಾವುದೇ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ 9 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜ ಪೇಟೆ, ರಾಮಮೂರ್ತಿನಗರ ಹಾಗೂ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
"ಆರೋಪಿಗಳು ತಂಬಾಕು ಹಾಗೂ ನಿಕೋಟಿನ್ ಅಂಶವಿರುವ ಅಪ್ಜಲ್ ಎಂಬ ಹೆಸರಿನ ಮೊಲಾಸಿಸ್, ದಿಲ್ಬಾಗ್, ಜೆಡ್ ಎಲ್-01, ACTION-7, ಬಾದ್ಷಾ, ಮಹಾರಾಯಲ್-717 (ಹುಕ್ಕಾ ಬಾರ್ಗೆ ಬಳಸುವ ಉತ್ಪನ್ನ) ಮತ್ತಿತರೆ ಉತ್ಪನ್ನಗಳನ್ನು ಸಾರ್ವಜನಿಕರು ಹಾಗೂ ಇತರೆ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ಫೆ. 9ರಂದು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಮಯದಲ್ಲಿ ಸುಮಾರು 1.45 ಕೋಟಿ ಮೌಲ್ಯದ ತಂಬಾಕು/ನಿಕೋಟಿನ್ ಉತ್ಪನ್ನಗಳು, 11 ಮೊಬೈಲ್ ಫೋನ್ಗಳು, 1.10 ಲಕ್ಷ ನಗದು ಹಾಗೂ ಒಂದು ಟಾಟಾ ಏಸ್ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿಗೆ ಕಳೆದ ಬುಧವಾರದಿಂದಲೇ ಜಾರಿಗೆ ಬರುವಂತೆ ನಿಷೇಧ ವಿಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
The Central Crime Branch (CCB) police seized Rs 1.45 crore worth of tobacco and nicotine products from various police station limits in the city and arrested nine people for storing and selling these banned products in the city. The seized tobacco and nicotine products are banned under the Cigarettes and Other Tobacco Products (COTPA) Act.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm