ಬ್ರೇಕಿಂಗ್ ನ್ಯೂಸ್
24-02-24 05:21 pm HK News Desk ಕ್ರೈಂ
ಬೆಳಗಾವಿ, ಫೆ.24: ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ಗೂ ಹೆಚ್ಚು ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಈ ಕಳ್ಳಭಟ್ಟಿ ಸಾರಾಯಿ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದರು.
ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಯ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಕಳ್ಳಭಟ್ಟಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ 200 ಲೀಟರ್ ಕಳ್ಳಭಟ್ಟಿ ಇರುವ 26 ಬ್ಯಾರಲ್, 30 ಲೀಟರ್ ಕಳ್ಳಭಟ್ಟಿ ಇರುವ 17 ಬ್ಯಾರಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು 12 ಲಕ್ಷ ರೂ. ಮೌಲ್ಯದ ಕಳ್ಳಭಟ್ಟಿ ಸಾರಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, "ಒಟ್ಟು 5700 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದೇವೆ. ಕೆಲವು ಮನೆಗಳ ಮೇಲೂ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಒಂದು ವಾರದ ಹಿಂದೆ ಬಂದ ಮಾಹಿತಿ ಆಧರಿಸಿ ಇಂದು ಕಾರ್ಯಾಚರಣೆ ನಡೆಸಿದ್ದೇವೆ. ಪೊಲೀಸರು ಬಂದ ತಕ್ಷಣ ಎಲ್ಲರೂ ಓಡಿ ಹೋಗಿದ್ದಾರೆ. ಒಬ್ಬ ಆರೋಪಿ ಮಾತ್ರ ಸಿಕ್ಕಿ ಬಿದ್ದಿದ್ದಾನೆ. ಕೆಲವು ದಿನಗಳಿಂದ ಇಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಯುತ್ತಿದೆ. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.
More than 5,000 litres of illicit liquor was seized by the police in the wee hours of Tuesday. Acting on a tip-off that the liquor was being run in a hilly area near Sonatti village in Belagavi taluk, the police launched an operation this morning.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm