ಬ್ರೇಕಿಂಗ್ ನ್ಯೂಸ್
08-04-24 08:22 pm HK News Desk ಕ್ರೈಂ
ಹುಬ್ಬಳ್ಳಿ , ಏ 08: ಸಾರ್ವಜನಿಕರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ವಂಚಿಸುತ್ತಿದ್ದ ಇಬ್ಬರು ಸೈಬರ್ ಕಳ್ಳರ ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಣಕಲ್ನ ಅಜಯ ತಂದೆ ರಾಮಸ್ವಾಮಿ ಹೀರೆಮಠ (23), ವಿದ್ಯಾ ನಗರದ ಭರತ ತಂದೆ ರಾಜೇಶ ಜೈನ್ (27) ಬಂಧಿತರು. ಇವರು ವಿದ್ಯಾನಗರ ಮನೆಯೊಂದರಲ್ಲಿ KKRCA Stock Investment ಅನ್ನುವ ಆನ್ಲೈನ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭಾಂಶ ಅಂದರೆ, 500% ರಿಟರ್ನ್ ಕೊಡುವುದಾಗಿ ಹೇಳಿ ದೂರುದಾರರ ಖಾತೆಯಿಂದ ಒಟ್ಟು 84,11,000/- ರೂ. ಹಣವನ್ನ ಆನ್ಲೈನ್ ಮುಖಾಂತರ ವರ್ಗಾವಣೆ ಮಾಡಿಕೊಂಡಿದ್ದಾರೆ. ಯಾವುದೇ ಲಾಭಾಂಶವನ್ನು ಕೊಡದೇ ವಂಚನೆ ಮಾಡಿದ್ದರು. ಈ ಬಗ್ಗೆ ವಂಚನೆಗೊಳಗಾದವರು ಹುಬ್ಬಳ್ಳಿ- ಧಾರವಾಡ ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆನ್ಲೈನ್ ಮೂಲಕ ಹಣ ವರ್ಗಾವಣೆ:
ಈ ಪ್ರಕರಣವನ್ನು ಭೇದಿಸುವ ನಿಟ್ಟಿನಲ್ಲಿ ಸಿಇಎನ್ ಕೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಬಿ. ಕೆ. ಪಾಟೀಲ, ಅವರ ನೇತೃತ್ವದ ತಂಡವು ದೂರುದಾರರ ಖಾತೆಯಿಂದ ಆನ್ಲೈನ್ ಮುಖಾಂತರ ಹಣ ವರ್ಗಾವಣೆ ಮಾಡಿಕೊಂಡಿದ್ದ ಆರೋಪಿತರ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಪಡೆದು ಪರಿಶೀಲನೆ ಮಾಡಿದಾಗ ಆರೋಪಿತರು ಹುಬ್ಬಳ್ಳಿಯ ಐ.ಡಿ.ಎಫ್.ಸಿ. ಬ್ಯಾಂಕಿನಲ್ಲಿ ಹಣ ವಿಥ್ಡ್ರಾ ಮಾಡಿಕೊಂಡ ಬಗ್ಗೆ ತಿಳಿದು ಬಂದಿದೆ.
ವಿಚಾರಣೆಯಿಂದ ಹೊರಬಂದ ಮಾಹಿತಿ:
ಕೂಡಲೇ ತನಿಖಾ ತಂಡವು ಆರೋಪಿತರನ್ನು ಪತ್ತೆಮಾಡಿ ಹುಬ್ಬಳ್ಳಿಯಲ್ಲಿ ಬಂಧಿಸಿ, ಹಚ್ಚಿನ ವಿಚಾರಣೆ ಮಾಡಿದಾಗ ಆರೋಪಿಗಳು ಸಾರ್ವಜನಿಕರ ಹೆಸರಿನಲ್ಲಿ ಹುಬ್ಬಳ್ಳಿಯ ವಿವಿಧ ಖಾಸಗಿ ಬ್ಯಾಂಕ್ಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿರುವುದು ಗೊತ್ತಾಗಿದೆ. ಈ ಖಾತೆಗಳಿಗೆ ಆನ್ಲೈನ್ ಮುಖಾಂತರ ಹಣ ವರ್ಗಾವಣೆ ಮಾಡಿಕೊಂಡು, 'ಬಿನಾನ್ಸ್ ಕ್ರಿಷ್ಟೋ ಕರೆನ್ಸಿ' ಪ್ಲಾಟ್ಫಾರ್ಮ್ನಲ್ಲಿ ಯುಎಸ್ಡಿಟಿಯನ್ನು ದೂರುದಾರರಿಂದ ತೆರೆಯಿಸಿ KKRCA Stock Investment ಆನ್ಲೈನ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು ಹೆಚ್ಚಿನ ಲಾಭಾಂಶ ಅಂದರೆ, 500% ರಿಟರ್ನ್ ಕೊಡುವುದಾಗಿ ಹೇಳುತ್ತಿದ್ದರು. ಹೂಡಿಕೆಯಾದ ಆ ಹಣವನ್ನು ವರ್ಗಾವಣೆ ಮಾಡಿಕೊಂಡು ಯುಎಸ್ಡಿಟಿಯನ್ನು ಖರೀದಿ ಮಾಡುವ ಮತ್ತು ಮಾರಾಟ ಮಾಡುವ ಮೂಲಕ ಅಕ್ರಮ ಹಣ ಸಂಪಾದನೆ ವ್ಯವಹಾರದಲ್ಲಿ ತೊಡಗಿದ್ದನ್ನು ಒಪ್ಪಿಕೊಂಡಿದ್ದಾರೆ. ಸೈಬರ್ ವಂಚಕರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Hubballi 84 lakh rs fraud in the name of stock market, two youths arrested. The accused are as Ajay Ramaswami Hiremath, 23, a resident of Unkal; and Bharat Rajesh Jain, 27, a resident of Vidyanagar. “The search is on for other accused,” police said.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm