ಬ್ರೇಕಿಂಗ್ ನ್ಯೂಸ್
01-12-20 12:21 pm Udupi Correspondent ಕ್ರೈಂ
ಉಡುಪಿ, ಡಿ.1: ಒಂದು ವರ್ಷದ ಹಿಂದೆ ತನ್ನದೇ ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೀಡಾಗಿದ್ದ ಆರೋಪಿ ತಂದೆಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿಯ ಪತ್ನಿ ಮಾನಸಿಕ ಖಿನ್ನರಾಗಿದ್ದು, ಆತ ತನ್ನ 14 ವರ್ಷ ಪ್ರಾಯದ ಕಿರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಇದನ್ನು 16 ವರ್ಷ ಪ್ರಾಯದ ಹಿರಿಯ ಮಗಳು ವಿರೋಧಿಸಿದ್ದಳು. ಮುಂದೆ ಪತ್ನಿ ಮೃತಪಟ್ಟ ನಂತರವೂ ಆರೋಪಿ ತನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದನ್ನು ಮುಂದುವರೆಸಿದ್ದ ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದಿದ್ದರು. ಅದರಂತೆ ಘಟಕದ ಕಾನೂನು ಪರಿ ವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, 2019 ಅಕ್ಟೋಬರ್ ತಿಂಗಳಿನಲ್ಲಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಈ ಬಗ್ಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 26 ಮಂದಿ ಸಾಕ್ಷಿಗಳ ಪೈಕಿ ಸಂತ್ರಸ್ತ ಸಹೋದರಿಯರು ಹಾಗೂ ದೂರುದಾರರು ಸೇರಿದಂತೆ 8 ಮಂದಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ವನಮಾಲಾ ಆನಂದರಾವ್, ಆರೋಪಿ ತಂದೆ ನಡೆಸಿದ ಕೃತ್ಯ ಸಾಬೀತಾಗಿರುವುದಾಗಿ ಅಭಿಪ್ರಾಯಪಟ್ಟು, ಪೋಕ್ಸೋ ತಿದ್ದುಪಡಿ ಕಾಯ್ದೆ 2019ರಂತೆ ಆರೋಪಿಗೆ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ಹಾಗೂ 15,000 ದಂಡ ವಿಧಿಸಿ ಆದೇಶ ನೀಡಿದರು. ಉಡುಪಿಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕಟಿಸಿರುವ ಪ್ರಥಮ ಘೋರ ಶಿಕ್ಷೆ ಇದಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ 7 ವರ್ಷ ಕಠಿಣ ಜೈಲು ಶಿಕ್ಷೆ, ಕೊಲೆ ಬೆದರಿಕೆಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ಕಟ್ಟದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದನೇ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ಮತ್ತು 2ನೇ ನೊಂದ ಬಾಲಕಿಗೆ 1.5 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಉಡುಪಿಯ ವಿಶೇಷ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಂತ್ರಸ್ತರ ಪರ ವಾದ ಮಂಡಿಸಿದ್ದಾರೆ.
A fast-track special court (FTSC) for POCSO cases–1, coming under Udupi district additional and sessions court has sentenced a father to life imprisonment after he was convicted of sexually assaulting his daughters.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm