ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm