ಬ್ರೇಕಿಂಗ್ ನ್ಯೂಸ್
16-05-24 01:42 pm HK News Desk ಕ್ರೈಂ
ಹುಬ್ಬಳ್ಳಿ, ಮೇ 16: ಬುಧವಾರ ಬೆಳಗ್ಗೆ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ ಕಾನ್ಸ್ಟೇಬಲ್ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಹೆಡ್ ಕಾನ್ಸ್ಟೇಬಲ್ ರೇಖಾ ಹಾವರಡ್ಡಿ ಅಮಾನತಾದ ಸಿಬ್ಬಂದಿ.
ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಎಂಬಾತ ಆಕೆಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಸ್ಥರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, "ಅಂಜಲಿಯನ್ನು ವಿಶ್ವನಾಥ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದೇ ಇದ್ದಾಗ ನೇಹಾ ಹಿರೇಮಠಗೆ ಆದ ಹಾಗೆಯೇ ನಿನಗೂ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡಿದ್ದ ನಾವು ಈ ಬಗ್ಗೆ ತಿಳಿಸಲು ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಪೊಲೀಸರು "ಇವೆಲ್ಲಾ ಮೂಢನಂಬಿಕೆ" ಎಂದು ಹೇಳಿ ಘಟನೆಯನ್ನು ನಿರ್ಲರ್ಕ್ಷಿಸಿದ್ದರು. ಅಂದೇ ಆರೋಪಿಯ ಮೇಲೆ ಕಠಿಣ ಕ್ರಮ ತೆಗೆದುಕೊಂಡು, ಪ್ರಕರಣ ದಾಖಲಿಸುತ್ತಿದ್ದರೆ ಹತ್ಯೆ ತಪ್ಪಿಸಬಹುದಿತ್ತು" ಎಂದು ಆರೋಪಿಸಿದ್ದಾರೆ.
ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಬಸವರಾಜ ಬೊಮ್ಮಾಯಿ:
ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ
ಗದಗನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Hubballi Anjali murder case Bendigeri Police Inspector C B Chikkodi and woman head constable suspended. After ordering an investigation by DCP (crime and traffic) into the matter, Police Commissioner Renuka Sukumar suspended Bendigeri Police Inspector C B Chikkodi and woman head constable Rekha Havaraddi from service, on charges of dereliction of duty.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm