ಬ್ರೇಕಿಂಗ್ ನ್ಯೂಸ್
05-06-24 09:26 pm Bangalore Correspondent ಕ್ರೈಂ
ಬೆಂಗಳೂರು, ಜೂ 05: ಗಂಡ- ಹೆಂಡತಿ ಜಗಳ ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ.
ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.
ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ.
ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ.
ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ಆತನ ಆಸೆಯಂತೆ ಕುಟುಂಬಸ್ಥರು ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.
ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.
23 year old software engineer stabbed by father during fight at home in Bangalore. The diseased has been identified as Yashwant. His father and mother were fighting over looking after their grandmother who is sick, during which when son came to stop the fight he was stabbed by his father.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm