ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm