ಬ್ರೇಕಿಂಗ್ ನ್ಯೂಸ್
16-06-24 03:48 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 16: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಾಕೆ ಅಲ್ಲಿಂದಲೇ ಚಿನ್ನಾಭರಣ ಕದ್ದು ಅದನ್ನು ಚಿನ್ನದ ಗಟ್ಟಿಗಳನ್ನಾಗಿಸಿ ಮನೆಯಲ್ಲಿ ಬಚ್ಚಿಟ್ಟಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಈಕೆಯ ಬಳಿಯಿಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲವು ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕಪಾಟಿನಲ್ಲಿದ್ದ ಕೀ ತೆಗೆದುಕೊಂಡು ಅದರಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಮನೆಯವರು ಕಾರ್ಯಕ್ರಮ ಮುಗಿಸಿಕೊಂಡು ಮರಳಿ ತಿಂಗಳು ಕಳೆದರೂ ಕಪಾಟಿನಲ್ಲಿದ್ದ ಚಿನ್ನಾಭರಣ ಇಲ್ಲದಾಗಿರುವುದನ್ನು ಗಮನಿಸಿರಲಿಲ್ಲ. ಜೂನ್ 7ರಂದು ಅಮರೇಂದ್ರ ಕಪಾಟು ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿತ್ತು.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಗೆ ಅಮರೇಂದ್ರ ದೂರು ನೀಡಿದ್ದರು. ಕೆಲಸದಾಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
2023 ನವೆಂಬರ್ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ತಿಳಿದಿರುವುದು 6 ತಿಂಗಳ ಬಳಿಕ. ಕುಟುಂಬಸ್ಥರ ಜೊತೆಗೆ ತೆರಳಿದ್ದಾಗ ಮನೆಯಲ್ಲಿ ಮಮತಾ ಒಬ್ಬಳೇ ಇದ್ದ ಕಾರಣ ಆಕೆಯ ಮೇಲೆ ಅನುಮಾನ ಮೂಡಿತ್ತು. ಆಕೆಯ ಮನೆಯಲ್ಲಿ ಶೋಧ ನಡೆಸಿದಾಗ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.
Police arrested a woman who was working as a housekeeper in the house of a businessman and stole gold jewelery from there and converted it into gold bars and hid it in the house.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm