ಬ್ರೇಕಿಂಗ್ ನ್ಯೂಸ್
23-07-24 03:03 pm HK News Desk ಕ್ರೈಂ
ರಾಮನಗರ, ಜುಲೈ.23: ರಾಮನಗರದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೇಸಗಿ ಬಳಿಕ ಕೊಂದು ಹಾಕಿದ್ದಾನೆ.
ಮೂರು ದಿನದ ಹಿಂದೆ ಕಾಣೆಯಾಗಿದ್ದ 4 ವರ್ಷದ ಹೆಣ್ಣು ಮಗುವನ್ನು ಅವರ ಸಂಬಂಧಿಯೇ ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ಸೋಮವಾರ ರಾತ್ರಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಮಗು ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.
ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಮಗು ಹಾಗೂ ಆರೋಪಿಗಾಗಿ ಹುಡುಕಾಟ ನಡೆಸಿದ್ದೆವು ಎಂದು ಹೇಳಿದರು.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ, ಆರೋಪಿ ತಿಪ್ಪಗೊಂಡನಹಳ್ಳಿ ಬಳಿಯ ರಸ್ತೆಯಲ್ಲಿ ಓಡಾಡಿರುವುದು ಗೊತ್ತಾಯಿತು. ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಬಂಡೆಯ ಬಳಿ ಬೆತ್ತಲೆ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಯಿತು. ನಂತರ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಹ ಬಂಧಿಸಲಾಯಿತು. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.

ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ;
ಆರೋಪಿ ಇಮ್ರಾನ್ ಖಾನ್ನನ್ನು ಎನ್ಕೌಂಟರ್ ಮಾಡುವಂತೆ ಕುಟುಂಬಸ್ಥರು ಸೇರಿ ಸಾರ್ವಜನಿಕರು ಪ್ರತಿಭಟಿಸಿದರು. ಮಾಗಡಿ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಸಾವಿರಾರು ಜನರು ಪ್ರತಿಭಟಿಸಿದರು. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
Ramnagara rape and murder of 4 year old girl, accused arrested. Public protest to encounter the accused or handover him to them. The 4 year old girl was told of buying icecream and later raped.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm