ಬ್ರೇಕಿಂಗ್ ನ್ಯೂಸ್
30-07-24 05:03 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.30: ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆ ಸೇರಿದಂತೆ ಮೂವರನ್ನ ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ದಿವ್ಯಾ, ಮಂಜು ಹಾಗೂ ಜೋಮನ್ ಎಂಬುವರಿಂದ 30 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಯಮಲೂರಿನ ದಿವ್ಯಶ್ರೀ ಟೆಕ್ ಪಾರ್ಕ್ನ ವಿಲ್ಲಾವೊಂದರಲ್ಲಿ ನೆಲೆಸಿದ್ದ ಉದ್ಯಮಿ ಮನೆಯಲ್ಲಿ ದಿವ್ಯಾ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು. ರಜೆ ಹಿನ್ನೆಲೆಯಲ್ಲಿ ಮಾಲೀಕರ ಕುಟುಂಬ ಜುಲೈ 13 ರಂದು ರಜೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿತ್ತು. 27ರಂದು ಪ್ರವಾಸ ಮುಗಿಸಿ ಮನೆಗೆ ಬಂದು ಪರಿಶೀಲಿಸಿದಾಗ ಡೈಮಂಡ್ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ.
ಈ ಸಂಬಂಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ವಿರುದ್ಧ ಅನುಮಾನ ವ್ಯಕ್ತಪಡಿಸಿ, ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮನೆಕೆಲಸದಾರರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ ದಿವ್ಯಾ ಕಳ್ಳತನ ಮಾಡಿರುವುದನ್ನ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಾಲೀಕರ ಮಕ್ಕಳನ್ನ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ದಿವ್ಯಾ, ಹಂತ - ಹಂತವಾಗಿ ಕಳೆದ ಆರು ತಿಂಗಳಿಂದ ಚಿನ್ನಾಭರಣ ಎಗರಿಸಿರುವ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಕೈ ಕುಯ್ದುಕೊಳ್ಳಲು ಯತ್ನಿಸಿ ಹೈಡ್ರಾಮ ಮಾಡಿದ್ದಳು.
ಈಕೆ ನೀಡಿದ ಮಾಹಿತಿ ಮೇರೆಗೆ 30 ಲಕ್ಷ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕಳ್ಳತನ ಮಾಡಿದ ಮಾಲನ್ನ ಮಂಜು ಬಚ್ಚಿಟ್ಟು ಅದನ್ನ ವಿಲೇವಾರಿ ಮಾಡುವ ಕೆಲಸವನ್ನ ಡ್ರೈವರ್ ಆಗಿದ್ದ ಜೋಮನ್ಗೆ ವಹಿಸಿದ್ದಳು. ಇನ್ನೇನು ಅಡ ಇಡಲು ಮುಂದಾಗುವಷ್ಟರಲ್ಲೇ ಆರೋಪಿತರನ್ನ ಪೊಲೀಸರು ಲಾಕ್ ಮಾಡಿದ್ದಾರೆ.
Three maids arrested for stealing gold worth 34 lakhs in Bangalore. The maid who was looking after the owners children began to steal gold step by step and joined hands with two others. The police have recovered the stolen gold.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm