ಬ್ರೇಕಿಂಗ್ ನ್ಯೂಸ್
26-08-24 01:34 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 26: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಉಡುಪಿಯ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಆನ್ಲೈನ್ ಮೂಲಕ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಗುಜರಾತ್ ರಾಜ್ಯದ ಸೂರತ್ನ ನವಾದಿಯಾ ಮುಖೇಶ್ ಭಾಯಿ ಗಣೇಶ್ಬಾಯಿ(44) ಹಾಗೂ ರಾಜ್ಕೋಟ್ ಜಿಲ್ಲೆಯ ಧರಮ್ಜೀತ್ ಕಮಲೇಶ್ ಚೌಹಾನ್(28) ಬಂಧಿತ ಆರೋಪಿಗಳು. ಇವರಿಂದ 5 ಮೊಬೈಲ್ ಪೋನ್ ಹಾಗೂ 13,95,000 ರೂ. ನಗದನ್ನು ಪೊಲೀಸರು ವಶಪಡಿಸಿದ್ದಾರೆ.
ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್(53) ಎಂಬವರಿಗೆ ಜು.29ರಂದು ಅಪರಿಚಿತರು ಕಸ್ಟಮ್ಸ್ ಇಲಾಖೆಯ ಹೆಸರಲ್ಲಿ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್ನಲ್ಲಿ 5 ಪಾಸ್ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ ಇದ್ದು, ಕೊರಿಯರ್ ಮುಂಬೈ ಕಸ್ಟಮ್ಸ್ ವಶದಲ್ಲಿ ಇರುವುದಾಗಿ ತಿಳಿಸಿದ್ದರು.
ಬಳಿಕ ಪೊಲೀಸ್ ಅಧಿಕಾರಿ ಎಂದು ನಂಬಿಸಿದ್ದ ಮತ್ತೊಬ್ಬ ವ್ಯಕ್ತಿ ಅರುಣ್ ಕುಮಾರ್ಗೆ ಕರೆ ಮಾಡಿ, ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಬಗ್ಗೆ ದೂರನ್ನು ಸ್ವೀಕರಿಸಲಾಗಿದ್ದು, ನಿಮ್ಮ ಆಧಾರ್ ಕಾರ್ಡ್ ಅನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ಬೆದರಿಸಿದ್ದರು. ಅಲ್ಲದೆ ಜು.29ರಿಂದ ಆ.9ರ ತನಕ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದರು.
ಪ್ರಕರಣವನ್ನು ಸರಿಪಡಿಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು ಅದರಂತೆ ಅರುಣ್ ಕುಮಾರ್, ತಮ್ಮ ಖಾತೆಯಿಂದ ಆ.6ರಿಂದ ಆ.9ರ ವರೆಗೆ ಹಂತ ಹಂತವಾಗಿ ಒಟ್ಟು 13,3,81,000 ರೂ. ಹಣವನ್ನು ವರ್ಗಾಯಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಸ್ಸೈ ಅಶೋಕ್, ಸಿಬ್ಬಂದಿ ಪ್ರವೀಣ ಶೆಟ್ಟಿಗಾರ್, ರಾಜೇಶ್, ಅರುಣ ಕುಮಾರ್, ಯತೀನ್ ಕುಮಾರ್, ರಾಘವೇಂದ್ರ ಕಾರ್ಕಡ, ದಿಕ್ಷೀತ್, ಪ್ರಶಾಂತ್, ಮುತ್ತೆಪ್ಪ ಆಡೀನ್, ಮಾಯಪ್ಪ ಗಡಾದೆ, ಪರಶುರಾಮ ಮತ್ತು ಸುದೀಪ್ ಅವರನ್ನು ಒಳಗೊಂಡ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ.
The Udupi Cyber Police have arrested two individuals from Gujarat for cheating a local doctor of crores of rupees online. The accused, Mukesh Bhai Ganeshbhai (44) and Dharamjeet Kamlesh Chauhan (28) were arrested for posing as Mumbai customs officials and deceiving Dr. Arun Kumar (53) into transferring ₹1,33,81,000 into various bank accounts.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm