ಬ್ರೇಕಿಂಗ್ ನ್ಯೂಸ್
31-08-24 05:04 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.31: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ವಂಚಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಬಕ ನಿವಾಸಿ ನಿತೇಶ್ (30) ಶಿಕ್ಷೆಗೀಡಾದ ಯುವಕ. ನಿತೇಶ್ ಜೊತೆ ಆತನ ತಂದೆ ರಾಮಣ್ಣ ಪೂಜಾರಿ (62) ಮತ್ತು ಸಂಬಂಧಿಕ ನಿಖಿತಾಶ್ ಸುವರ್ಣ (40) ಅವರಿಗೂ 5 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ನಿತೇಶ್ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಬಳಿಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅಲ್ಲದೇ, ಆಕೆಯ ಮನೆಗೂ ಹೋಗಿ ಅತ್ಯಾಚಾರ ನಡೆಸಿದ್ದ. ಯುವತಿ ವಿವಾಹದ ಬಗ್ಗೆ ಕೇಳಿಕೊಂಡಾಗ ನಿರಾಕರಿಸಿದ್ದ. ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ನಿತೇಶ್ ಹೇಳಿದ್ದ. ಆತನ ತಂದೆ ಮತ್ತು ಬಾವನ ಬಳಿ ಯುವತಿ ಕೇಳಿಕೊಂಡಾಗ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಅಪರಾಧಿ ನಿತೇಶ್ಗೆ ಕಲಂ 376 (2) ಅಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ಕಲಂ 418ರ ಅಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ರಾಮಣ್ಣ ಪೂಜಾರಿ ಮತ್ತು ನಿಖಿತಾಶ್ಗೆ ಭಾರತೀಯ ದಂಡ ಸಂಹಿತೆಯ ಕಲಂ 504 ರಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಭಾ.ದಂ.ಸ ಕಲಂ 506ರಡಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ, ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷಿಗಳ ವಿಚಾರಣೆಯನ್ನು ಸರ್ಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ನಡೆಸಿದ್ದರು. ಅನಂತರ ಸರ್ಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಉಳಿದ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಒಟ್ಟು 16 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿ, 88 ದಾಖಲೆಗಳನ್ನು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ.
Mangalore court sentences three to 10 years of imprisonment for cheating girl of marriage. Youth from puttur who fell in love with the girl later rejected her for marriage after having physical relationship with her.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm