ಬ್ರೇಕಿಂಗ್ ನ್ಯೂಸ್
12-09-24 01:37 pm Mangaluru Correspondent ಕ್ರೈಂ
ಮಂಡ್ಯ, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ಮೆರವಣಿ ನಡೆಯುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಕೋಮು ದ್ವೇಷದ ಗಲಭೆ ಹೊತ್ತುಕೊಂಡಿದೆ. ಮಂಡ್ಯ- ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ನಿವಾಸ ಸೇರಿದಂತೆ ಹಿಂದೂಗಳ ಮನೆಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ 10ಕ್ಕೆ ಹೆಚ್ಚು ಬೈಕ್ ಸುಟ್ಟು ಕರಕಲಾಗಿವೆ, 13ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಇಡಲಾಗಿದೆ. ಎರಡು ಗುಂಪಿನವರೂ ಪರಸ್ಪರ ಕಲ್ಲು ತೂರಾಟ ನಡೆಸಿದ್ದು ರಾತ್ರೋರಾತ್ರಿ ಕೋಮು ಘರ್ಷಣೆ ಉಂಟಾಗಿದೆ. ಎಂಟು ಮಂದಿ ಗಾಯಗೊಂಡಿದ್ದು ಓರ್ವ ಪಿಎಸ್ಐ ಸಿಬಂದಿಯೂ ಗಾಯಗೊಂಡಿದ್ದಾರೆ. ಘಟನೆಗೆ ರಾಜ್ಯಾದ್ಯಂತ ಹಿಂದು ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ರೀತಿ ನಡೆದುಹೋಗಿದೆ, ಇದಕ್ಕೆ ದೊಡ್ಡ ಪ್ರಚಾರ ಕೊಡಬೇಡಿ !
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಗೃಹ ಸಚಿವ ಪರಮೇಶ್ವರ್, ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಒಬ್ಬರಿಗೊಬ್ಬರು ಘರ್ಷಣೆ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟರು. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಈ ರೀತಿಯ ಘಟನೆ ನಡೆಯಬಾರದಿತ್ತು. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ. ಆಕಸ್ಮಿಕ ರೀತಿಯಲ್ಲಿ ನಡೆದುಹೋಗಿದೆ ಎಂದು ಹೇಳಿದ್ದಾರೆ.
52 ಜನ ಬಂಧನ, ಪೊಲೀಸರಿಗೂ ಕಲ್ಲೇಟು
ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿವೆ. ಅದನ್ನು ಆಧರಿಸಿ ಕಲ್ಲು ತೂರಿದವರು ಹಾಗು ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲೇಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
Communal tensions gripped Nagamangala town in Karnataka's Mandya district on Wednesday after clashes erupted between two groups during the Ganpati procession, news agency PTI reported.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm