ಬ್ರೇಕಿಂಗ್ ನ್ಯೂಸ್
15-09-24 01:21 pm Bangalore Correspondent ಕ್ರೈಂ
ಬೆಂಗಳೂರು, ಸೆ.15: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನನಗೆ ಪರಿಚಿತರು, ಕೋರ್ಟಿನಲ್ಲಿ ಕೆಲಸ ತೆಗೆಸಿಕೊಡುತ್ತೇನೆ ಎಂದು ನಂಬಿಸಿ 80ಕ್ಕೂ ಅಧಿಕ ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳದಲ್ಲಿ ಖಾಸಗಿ ಕಾಲೇಜು ನಡೆಸುತ್ತಿರುವ ಸಿದ್ದಲಿಂಗಯ್ಯ ಹಿರೇಮಠ ಆರೋಪಿಯಾಗಿದ್ದು ಸಂತ್ರಸ್ತರು ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಪಿಎಸ್ಐ ನೇಮಕಾತಿ, ಕೆಪಿಟಿಸಿಎಲ್ ನೇಮಕಾತಿ ಸೇರಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಸದ್ದು ಮಾಡಿರುವಾಗಲೇ ನ್ಯಾಯಾಲಯಗಳಲ್ಲಿ ಎಫ್ಡಿಎ, ಪ್ರೋಸೆಸ್ ಸರ್ವರ್ ಹುದ್ದೆ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪ ಕೇಳಿಬಂದಿದೆ. ಕೊಪ್ಪಳದಲ್ಲಿ ಖಾಸಗಿ ಕಾಲೇಜು ನಡೆಸುತ್ತಿರುವ ಸಿದ್ದಲಿಂಗಯ್ಯ ಹಿರೇಮಠ ಪ್ರಕರಣದ ಮಾಸ್ಟರ್ ಮೈಂಡ್. ಬೆಂಗಳೂರಿನ ನಿವಾಸಿ ಅಬ್ದುಲ್ ರಜಾಕ್ ದೂರು ಆಧರಿಸಿ ಈತನ ವಿರುದ್ಧ ಬೆಂಗಳೂರು ಕೇಂದ್ರ ಅಪರಾಧ ಶಾಖೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಜುಲೈ 31ರಂದು ಪ್ರಕರಣ ದಾಖಲಾಗಿದೆ. ತನಗೆ ನ್ಯಾಯಾಧೀಶರು ಪರಿಚಯವಿದ್ದಾರೆ ಎಂದು ಅಭ್ಯರ್ಥಿಗಳನ್ನು ನಂಬಿಸಿ ಹಣ ಪಡೆದು ವಂಚಿಸಿದ್ದಾನೆ ಎಂದು ದೂರು ನೀಡಿದ್ದಾರೆ.
ತನ್ನ ಚಿಕ್ಕಪ್ಪನ ಪುತ್ರ ಜಾವೇದ್ಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆರೋಪಿ 7 ಲಕ್ಷ ರೂ. ಪಡೆದಿದ್ದಾನೆ. ಅಷ್ಟೇ ಅಲ್ಲದೆ ತನ್ನ ಪರಿಚಿತರಿಗೂ ಮೋಸ ಮಾಡಿದ್ದು ಕೊರ್ಟ್ನಲ್ಲಿ ಪ್ರೋಸೆಸ್ ಸರ್ವರ್ ಕೆಲಸ ಕೊಡಿಸುವುದಾಗಿ ಹೇಳಿ ನಮ್ಮ ಪರಿಚಯಸ್ಥರಿಂದಲೇ ಆರೋಪಿ 49 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಈ ರೀತಿ 80ಕ್ಕೂ ಹೆಚ್ಚು ಮಂದಿಗೆ ವಂಚಿಸಿರುವ ಆರೋಪಗಳಿದ್ದು ತನಿಖೆ ನಡೆಸಬೇಕು ಎಂದು ಸಿಸಿಬಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A fraudulent job scheme has been uncovered, involving numerous job seekers who were misled into believing they would be offered positions as FDA process servers in courts. The perpetrator of this scam is Siddalingaiah Hiremath, the spouse of a former councillor of Koppal and the proprietor of a private college. On July 31, 2024, Abdul Razak from Bengaluru filed a complaint about Siddalingaiah Hiremath at the Bengaluru Central Crime Branch (CCB) police station.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm