ಬ್ರೇಕಿಂಗ್ ನ್ಯೂಸ್
05-11-24 10:22 pm HK News Desk ಕ್ರೈಂ
ಬೆಂಗಳೂರು, ನ.5: ಬೆಳಗಾವಿ ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆಗಿದ್ದ ವ್ಯಕ್ತಿಯೊಬ್ಬರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಎಂಬವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗಾವಿ ತಹಶೀಲ್ದಾರ್ ಬಸವರಾಜ ನಾಗರಾಳ ಅವರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ರುದ್ರಣ್ಣ ಯಡವಣ್ಣವರ್ (35) ಮಂಗಳವಾರ ನಸುಕಿನಲ್ಲಿ ನೇಣಿಗೆ ಶರಣಾಗಿದ್ದಾರೆ. ರುದ್ರಣ್ಣ ಯಡವಣ್ಣವರ್ ಅವರನ್ನು ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೋಮವಾರ (ನ.05) ಆದೇಶ ಹೊರಡಿಸಿದ್ದರು. ಇದರಿಂದ ತೀವ್ರ ಚಿಂತೆಗೀಡಾಗಿದ್ದ ಯಡಣ್ಣವರ್, ತಹಶೀಲ್ದಾರ್ ಕಚೇರಿ ವಾಟ್ಸಾಪ್ ಗ್ರೂಪ್ನಲ್ಲಿ ನನ್ನ (ರುದ್ರಣ್ಣ) ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಕಾರಣ ಅಂತ ಸೋಮವಾರ ಸಂಜೆ ಸಂದೇಶ ಕಳುಹಿಸಿದ್ದರು. ಅಲ್ಲದೆ, “ನಮ್ಮ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ದಯವಿಟ್ಟು ಎಲ್ಲರೂ ಒಟ್ಟಾಗಿ ಹೋರಾಡಿ” ಎಂದು ಮೆಸೇಜ್ ಹಾಕಿದ್ದರು.
ರಾತ್ರಿ ಯಾರದ್ದೋ ಫೋನ್ ಬಂದಿದ್ದು ಊಟ ಮಾಡುತ್ತಿದ್ದವನು ಅರ್ಧಕ್ಕೆ ಎದ್ದು ಹೋಗಿದ್ದ. ಆನಂತರ ಮನೆಯಲ್ಲಿ ಮಲಗಿದ್ದಾತ ಬೆಳಗ್ಗೆ ಇರಲಿಲ್ಲ. ವಾಕಿಂಗ್ ಹೋಗಿರಬೇಕು ಎಂದುಕೊಂಡಿದ್ದೆವು. ನಸುಕಿನಲ್ಲಿ ಕಚೇರಿಗೆ ಹೋಗಿ ಸಾವಿಗೆ ಶರಣಾಗಿದ್ದಾನೆ ಎಂದು ರುದ್ರೇಶ್ ತಾಯಿ ಕಣ್ಣೀರು ಹಾಕಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಿಎ ಸೋಮು ಹೆಸರು ಪ್ರಸ್ತಾಪಿಸಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯದಲ್ಲಿ ಮತ್ತೆ ಸಂಚಲನ ಎದ್ದಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಭ್ರಷ್ಟಾಚಾರಕ್ಕೆ ಮತ್ತೊಬ್ಬ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗದಲ್ಲಿ ಚಂದ್ರಶೇಖರ್ ಎಂಬವರ ಸಾವಿನಿಂದ ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಹೊರಬಂದಿತ್ತು. ಇದೀಗ ಮತ್ತೊಬ್ಬ ವ್ಯಕ್ತಿ ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
A 35-year-old man, a government employee working as a second division assistant at the Tahsildar office, was found dead inside the office in Belagavi city, Karnataka, on Tuesday. According to preliminary investigations, the police suspect that he died by suicide. In a death note, he mentioned the names of Lakshmi Hebbalkar and PA Soma.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 12:35 pm
Mangalore Correspondent
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm