ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am