ಬ್ರೇಕಿಂಗ್ ನ್ಯೂಸ್
18-12-24 09:23 pm Bangalore Correspondent ಕ್ರೈಂ
ಬೆಂಗಳೂರು, ಡಿ.18: ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ರಾಕೆಟನ್ನು ಪತ್ತೆ ಮಾಡಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸಹಿತ ಬರೋಬ್ಬರಿ 24 ಕೋಟಿ ಮೌಲ್ಯದ 12 ಕೇಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅತಿದೊಡ್ಡ ಡ್ರಗ್ ರಾಕೆಟ್ ಇದಾಗಿದೆ.
ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ಮಹಿಳೆ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಿ.13ರಂದು ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಹತ್ವದ ಕಾರ್ಯಾಚರಣೆಯಲ್ಲಿ 12 ಕೇಜಿಯಷ್ಟು ತೂಕದ ಬಿಳಿ ಮತ್ತು ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಿ ಮಹಿಳೆ ಟಿಸಿ ಪಾಳ್ಯದಲ್ಲಿ ಆಫ್ರಿಕಾ ಮೂಲದವರಿಗೆಂದೇ ಆಹಾರ ಸಾಮಗ್ರಿಗಳನ್ನು ವಿತರಿಸುವ ಅಂಗಡಿಯೊಂದನ್ನು ನಡೆಸುತ್ತಿದ್ದಾಳೆ ಎಂಬ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಅಂಗಡಿಯಲ್ಲಿದ್ದುಕೊಂಡೇ ಆಫ್ರಿಕನ್ನರಿಗೆ ಮತ್ತು ಇತರ ಗ್ರಾಹಕರಿಗೆ ಡ್ರಗ್ಸ್ ಅನ್ನೂ ಪೂರೈಕೆ ಮಾಡುತ್ತಿದ್ದಳು. ಈಕೆಗೆ ಸಪ್ಲೈ ಮಾಡುತ್ತಿದ್ದವರನ್ನು ಸರ್ಚ್ ಮಾಡುತ್ತಿದ್ದೇವೆ ಎಂದು ಬೆಂಗಳೂರು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮುಂಬೈನಿಂದ ಸೋಪ್ ಪ್ಯಾಕೆಟ್, ಒಣ ಮೀನಿನ ಪ್ಯಾಕೆಟ್ ಮೂಲಕ ಡ್ರಗ್ಸ್ ಅನ್ನು ಬೆಂಗಳೂರಿಗೆ ಪೂರೈಸುತ್ತಿದ್ದರು. ಅಲ್ಲದೆ, ಈ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಇತರರಿಗೆ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
12 ಕೇಜಿ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್, 70 ಏರ್ಟೆಲ್ ಸಿಮ್ ಅನ್ನು ವಶಕ್ಕೆ ಪಡೆಯಲಾಗಿದೆ. ಈಕೆಗೆ ಮುಂಬೈನಲ್ಲಿ ನೆಲೆಸಿರುವ ಒಬ್ಬಾಕೆ ಮಹಿಳೆಯೇ ಡ್ರಗ್ಸ್ ಪೂರೈಸುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಹಣ ಮಾಡುವುದಕ್ಕಾಗಿಯೇ ಈ ಡ್ರಗ್ಸ್ ರಾಕೆಟಲ್ಲಿ ತೊಡಗಿಸಿಕೊಂಡಿದ್ದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಅಲ್ಲದೆ, ಈಕೆ ಬಿಸಿನೆಸ್ ವೀಸಾದಲ್ಲಿ ಐದು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದು, ಅದರ ಅವಧಿ ಮುಗಿದರೂ ಅಕ್ರಮವಾಗಿ ಉಳಿದುಕೊಂಡಿದ್ದಳು.
Bengaluru, A foreign national was arrested for allegedly running a drug racket and 12 kg banned MDMA crystals worth an estimated ₹24 crore were seized from her possession here, police said on Tuesday.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm