ಬ್ರೇಕಿಂಗ್ ನ್ಯೂಸ್
22-12-24 07:23 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ನಗರದ ಸಾಫ್ಟ್ವೇರ್ ಉದ್ಯೋಗಿಯೊಬ್ಬರನ್ನ ಬರೋಬ್ಬರಿ 1 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಜಾಲದಲ್ಲಿ ಬೀಳಿಸಿದ ವಂಚಕರು, ಬರೋಬ್ಬರಿ 11.83 ಕೋಟಿ ರೂ. ದೋಚಿರುವ ಘಟನೆ ನಡೆದಿದೆ. ಆ ಮೂಲಕ ಇಲ್ಲಿಯವರೆಗೆ ರಾಜ್ಯದಲ್ಲಿ ವರದಿಯಾದ ಅತ್ಯಧಿಕ ಮೊತ್ತ ಕಳೆದುಕೊಂಡ ಡಿಜಿಟಲ್ ಅರೆಸ್ಟ್ ಪ್ರಕರಣ ಇದಾಗಿದೆ. ಹಣ ಕಳೆದುಕೊಂಡಿರುವ ವಿಜಯ್ ಕುಮಾರ್ ಎಂಬುವರು ನೀಡಿರುವ ದೂರಿನನ್ವಯ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಂಚಕರು ಮೋಸ ಮಾಡಿದ್ದು ಹೇಗೆ?
ಇಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ವಿಜಯ್ ಕುಮಾರ್ ಅವರಿಗೆ ನವೆಂಬರ್ 11ರಂದು ಬೆಳಗ್ಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ "ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ನ್ನು ಕಾನೂನುಬಾಹಿರ ಜಾಹೀರಾತು ಹಾಗೂ ಸಂದೇಶಗಳ ರವಾನೆಗೆ ಬಳಸಲಾಗಿದೆ. ಆ ನಂಬರ್ನಲ್ಲಿ ಸೇವೆಯನ್ನ ಸ್ಥಗಿತಗೊಳಿಸಲಾಗುತ್ತಿದೆ. ಹಾಗೂ ಮುಂಬೈನ ಕೊಲಾಬಾದ ಸೈಬರ್ ಕ್ರೈಂ ಠಾಣೆಯಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದ್ದು, ನೀವು ವಿಚಾರಣೆ ಎದುರಿಸಬೇಕಾಗುತ್ತದೆ'' ಎಂದು ಬೆದರಿಸಿದ್ದಾನೆ.
ಇದಾದ ಕೆಲವೇ ನಿಮಿಷಗಳಲ್ಲಿ ಕರೆ ಮಾಡಿದ್ದ ಮತ್ತೋರ್ವ ಅಪರಿಚಿತ ಸ್ಕೈಪ್ ವಿಡಿಯೋ ಕಾಲಿಂಗ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾನೆ. ಅದರಂತೆ ವಿಜಯ್ ಕುಮಾರ್ ಅವರು ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಬಳಿಕ ಪೊಲೀಸ್ ಧಿರಿಸಿನಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಕರೆ ಮಾಡಿ, ''ನಾನು ಮುಂಬೈ ಪೊಲೀಸ್ ಅಧಿಕಾರಿ'' ಎಂದು ಹೇಳಿದ್ದಾನೆ. "ಉದ್ಯಮಿ ನರೇಶ್ ಗೋಯಲ್ ಎಂಬುವರು ನಿಮ್ಮ ಆಧಾರ್ ಕಾರ್ಡ್ ಬಳಸಿ ಕೆನರಾ ಬ್ಯಾಂಕ್ನಲ್ಲಿ ಖಾತೆ ತೆರೆದು 6 ಕೋಟಿ ರೂ. ವಹಿವಾಟು ನಡೆಸಿದ್ದಾರೆ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ ಡಿಜಿಟಲ್ ಅರೆಸ್ಟ್ ಮಾಡುತ್ತಿರುವುದಾಗಿ'' ಬೆದರಿಸಿದ್ದಾನೆ. ಪ್ರಕರಣದ ತನಿಖೆಯ ಕುರಿತಂತೆ ಯಾರಿಗೂ ಮಾಹಿತಿ ನೀಡಬಾರದೆಂದು ಸೂಚಿಸಿದ್ದಾನೆ.
ನವೆಂಬರ್ 25 ರಂದು ಪುನಃ ಸ್ಕೈಪ್ ಮೂಲಕ ವಿಡಿಯೋ ಕರೆ ಮಾಡಿದ್ದ ವಂಚಕ, "ನಿಮ್ಮ ವಿರುದ್ಧದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ನಾವು ಹೇಳಿದಂತೆ ಕೇಳದಿದ್ದರೆ ನಿಮ್ಮ ಕುಟುಂಬ ಸದಸ್ಯರನ್ನ ಸಹ ಬಂಧಿಸಬೇಕಾಗುತ್ತದೆ. ತನಿಖೆಯ ಭಾಗವಾಗಿ ನಿಮ್ಮ ಬ್ಯಾಂಕ್ ಖಾತೆಯನ್ನ ಪರಿಶೀಲಿಸಬೇಕಿದ್ದು, ಹಣ ವರ್ಗಾವಣೆ ಮಾಡಬೇಕು'' ಎಂದಿದ್ದಾನೆ.
ಹಂತಹಂತವಾಗಿ ಹಣ ವರ್ಗಾವಣೆ:
ಅದರಂತೆ ಮೊದಲ ಬಾರಿಗೆ ವಂಚಕರು ನೀಡಿದ್ದ ಬ್ಯಾಂಕ್ ಖಾತೆಗೆ ವಿಜಯ್ ಕುಮಾರ್ ಅವರು 75 ಲಕ್ಷ ರೂ. ಬಳಿಕ ಮತ್ತೊಂದು ಖಾತೆಗೆ 3.41 ಕೋಟಿ ರೂ. ವರ್ಗಾಯಿಸಿದ್ದಾರೆ. ಇದೇ ರೀತಿ ಡಿಸೆಂಬರ್ 12ರ ವರೆಗೂ ಪ್ರತಿನಿತ್ಯ ವಿಜಯ್ಕುಮಾರ್ಗೆ ಕರೆ ಮಾಡಿ ಬಂಧನದ ಬೆದರಿಕೆಯೊಡ್ಡಿರುವ ಆರೋಪಿಗಳು ಒಟ್ಟು 11.83 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.
ಬ್ಯಾಂಕ್ ಖಾತೆಯಲ್ಲಿದ್ದ ಹಣ ಖಾಲಿಯಾದ ಬಳಿಕವೂ ಸಹ ವಂಚಕರ ಕಿರುಕುಳ ಮುಂದುವರೆದಾಗ ಇದು ಸೈಬರ್ ವಂಚಕರ ಕೃತ್ಯವೆಂಬುದು ವಿಜಯ್ ಕುಮಾರ್ ಅವರಿಗೆ ಅರಿವಾಗಿದೆ. ನಂತರ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ವಿಜಯ್ ಕುಮಾರ್ ದೂರು ನೀಡಿದ್ದಾರೆ. ವಂಚಕರು ಹಣ ವರ್ಗಾಯಿಸಿಕೊಂಡಿರುವ ಖಾತೆಗಳ ವಿವರ ಸಂಗ್ರಹಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
11 ತಿಂಗಳಲ್ಲಿ 491 ಡಿಜಿಟಲ್ ಅರೆಸ್ಟ್ ಪ್ರಕರಣ :
ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಾಖಲಾಗಿರುವ ಪಟ್ಟಿಯಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನ ಪಡೆದಿದೆ. 2024ರ ನವೆಂಬರ್ ಅಂತ್ಯಕ್ಕೆ ರಾಜ್ಯದಲ್ಲಿ 641 ಡಿಜಿಟಲ್ ಅರೆಸ್ಟ್ ಪ್ರಕರಣಗಳು ವರದಿಯಾಗಿದ್ದು, 109 ಕೋಟಿ ರೂ. ವಂಚಕರ ಪಾಲಾಗಿದೆ. ಆ ಪೈಕಿ ಬೆಂಗಳೂರಿನಲ್ಲಿ 480 ಪ್ರಕರಣಗಳು ವರದಿಯಾಗಿದ್ದು 42.4 ಕೊಟಿ ರೂ. ವಂಚಿಸಲಾಗಿದೆ. ಕೇವಲ 9 ಕೋಟಿ ರೂ. ಮಾತ್ರ ವಾಪಸ್ ಜಪ್ತಿ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Bangalore software engineer kept under digital arrest for one month, 11 crores looted. Vijay Kumar has now registered case in cen police station in Bangalore. Karnataka ranks no 2 in digital arrest in India.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm