ಬ್ರೇಕಿಂಗ್ ನ್ಯೂಸ್
07-01-25 03:50 pm Mangalore Correspondent ಕ್ರೈಂ
ಮಂಗಳೂರು, ಜ 07: ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಗಗನ್ (24) ಶಿಕ್ಷೆಗೊಳಗಾದವ.
ಪ್ರಕರಣ ನಡೆದು ಕೇವಲ 9 ತಿಂಗಳಿನಲ್ಲೇ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 354 (ಸಿ) ಅಡಿಯಲ್ಲಿ ಆರೋಪಿಗೆ 1 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10 ಸಾವಿರ ರೂ. ಮತ್ತು ಪ್ರತ್ಯೇಕವಾಗಿ 1 ಲಕ್ಷ ರೂ. ಹಣವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.
ಪ್ರಕರಣದ ಹಿನ್ನೆಲೆ:
ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ.10ರಂದು ರಾತ್ರಿ 8:45ರ ಸುಮಾರಿಗೆ ಅಪ್ರಾಪ್ತ ಬಾಲಕಿ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಆರೋಪಿ ಗಗನ್ (24) ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಮೊಬೈಲ್ ಲೈಟ್ ಕಂಡು ಬಾಲಕಿ ಕೂಗಿದಾಗ ಅವರ ತಾಯಿ ಬಂದಿದ್ದರು. ಈ ವೇಳೆ ಆರೋಪಿ ಓಡಿಹೋಗಿ ತಪ್ಪಿಸಿಕೊಂಡಿದ್ದನು ಎಂದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಐಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣ ಸಂಬಂಧ ಎಸ್ಐ ಸತೀಶ್ ಕೆ.ಎಸ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
Mangalore 24 year old youth gets life imprisonment by the Mangalore court for recording nude video of minor girl while having bath. The accused has been identified as Gagan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm