ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am