ಬ್ರೇಕಿಂಗ್ ನ್ಯೂಸ್
31-01-25 10:22 am HK News Desk ಕ್ರೈಂ
ಹಾಸನ, ಜ 31: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿ ಅಟ್ಟಹಾಸ ಮೆರೆದಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ಗುರುವಾರ ನಡೆದಿದೆ.
ಮನು ಬಂಧಿತ ಆರೋಪಿ. ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರಿದಿದ್ದಾರೆ. ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಹಾಸನ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬುಧವಾರ ರಾತ್ರಿ 2 ಸುಮಾರಿಗೆ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ತನ್ನ ಕಾರನ್ನು ಖಾಸಗಿ ಬಸ್ಗೆ ಅಡ್ಡಲಾಗಿ ನಿಲ್ಲಿಸಿ ಚಾಲಕನನ್ನು ಬೆದರಿಸಲು ನೋಡಿದ್ದಾನೆ. ಅಷ್ಟೇ ಅಲ್ಲ, ಕಾರಿನಲ್ಲಿದ್ದ ಮಾರಕಾಸ್ತ್ರವನ್ನು ತೆಗೆದು ಬಸ್ ಮುಂಭಾಗದ ಗಾಜನ್ನು ಒಡೆದು ಪುಡಿ ಪುಡಿ ಮಾಡಿದ್ದ. ಇದರ ದೃಶ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ಕುರಿತು ಮಾಹಿತಿ ಸಿಕ್ಕ ನಂತರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
The #HassanPolice have registered a case against a rowdy-sheeter who attacked a private bus with a machete, leaving passengers traumatised.
— Hate Detector 🔍 (@HateDetectors) January 30, 2025
The incident occurred following a quarrel between the accused and the bus driver over overtaking.
Reprtedly, the accused is currently… pic.twitter.com/3MhxicPei4
Hassan police open fire at person who attacked a private bus coming towards Mangalore from Bangalore. Manu, the accused, recently waylaid a private bus on the Bengaluru-Mangaluru highway near Hassan by stopping his car and later hit the windshield with a lethal weapon. A video clip of his act went viral on social media platforms.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm