ಬ್ರೇಕಿಂಗ್ ನ್ಯೂಸ್
25-03-25 06:09 pm Bangalore Correspondent ಕ್ರೈಂ
ಬೆಂಗಳೂರು, ಮಾ.25 : ನಿಮ್ಮ ಕುಟುಂಬಕ್ಕೆ ವಾಮಾಚಾರ ಆಗಿದೆ, ಪೂಜೆ ಮಾಡಿಸುತ್ತೇನೆಂದು ಹೇಳಿ ವಿವಾಹಿತ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಿರಣ್ ಕುಮಾರ್ ಗುರೂಜಿ ಹಾಗೂ ಆತನ ಸಹಚರ ಲೋಹಿತ್ ಎಂಬವರ ವಿರುದ್ಧ ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಗಾಯತ್ರಿ ನಗರ ನಿವಾಸಿ 49 ವರ್ಷದ ರೂಪಶ್ರೀ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ಪತಿ ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳು ಸಹ ತಂದೆ ಜೊತೆಗೆ ಅಲ್ಲಿಯೇ ನೆಲೆಸಿದ್ದಾರೆ. ವೃದ್ಧ ತಂದೆಯೊಂದಿಗೆ ವಾಸವಿದ್ದ ಮಹಿಳೆಗೆ 3 ವರ್ಷಗಳ ಹಿಂದೆ ಪರಿಚಯವಾಗಿದ್ದ ಕಿರಣ್ ಕುಮಾರ್ ಗುರೂಜಿ, 'ನಿಮ್ಮ ಕುಟುಂಬದ ಮೇಲೆ ಯಾರೋ ವಾಮಾಚಾರ ಮಾಡಿದ್ದಾರೆ. ಪರಿಹಾರ ಮಾಡದಿದ್ದರೆ ಪತಿಯ ಜೀವಕ್ಕೆ ಅಪಾಯವಿದೆ ಎಂದು ನಂಬಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶೇಷ ಪೂಜೆ ಮಾಡಿಸಬೇಕು ಎಂದು ಹೇಳಿದ್ದಾರೆ.
ಇದಕ್ಕಾಗಿ ದೂರುದಾರ ಮಹಿಳೆಯಿಂದ ಹಂತ, ಹಂತವಾಗಿ ಹಣ ಪಡೆದಿದ್ದಾರೆ. ನಗದು ಮಾತ್ರವಲ್ಲದೆ, ಜಮೀನು ಮತ್ತಿತರರ ಆಸ್ತಿಗಳನ್ನು ಮಾರಿಸಿ, 1 ಕೋಟಿ ರೂ.ಗೂ ಅಧಿಕ ಹಣ ಪಡೆದಿದ್ದಾರೆ. ಅಲ್ಲದೆ, ದೇವರಿಗೆ ಅರ್ಪಿಸಬೇಕೆಂದು ಚಿನ್ನದ 80 ಗ್ರಾಂ ರುದ್ರಾಕ್ಷಿ ಹಾರ, 5 ಗ್ರಾಂ ಉಂಗುರ, 30 ಗ್ರಾಂ ಮ್ಯಾಂಗೋ ಡಿಸೈನ್ ಹಾರ, 28 ಗ್ರಾಂ ಆ್ಯಂಟಿಕ್ ಡಿಸೈನ್ ನೆಕ್ಲೆಸ್, 30 ತಾಳಿ ಬೊಟ್ಟುಗಳನ್ನು ಗುರೂಜಿ ಪಡೆದಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.
ಚಿನ್ನ ಮತ್ತು ಅಷ್ಟು ಹಣದ ಬಗ್ಗೆ ಕೇಳಿದಾಗ ಕಿರಣ್ ಕುಮಾರ್ ಗುರೂಜಿ ಹಾಗೂ ಲೋಹಿತ್ ಅವಾಚ್ಯ ಪದಗಳಿಂದ ನಿಂದಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರುದಾರ ಮಹಿಳೆ ಆರೋಪಿಸಿದ್ದಾರೆ. ಕಿರಣ್ ಕುಮಾರ್ ಗುರೂಜಿ ಹಾಗೂ ಲೋಹಿತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A woman has filed a police complaint against self-proclaimed spiritual leader Guruji Kiran Kumar, alleging that he swindled her out of crores of rupees and valuable jewelry by convincing her to perform a series of rituals, purportedly aimed at warding off negative energies with the help of witchcraft.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm