ಬ್ರೇಕಿಂಗ್ ನ್ಯೂಸ್
03-04-25 05:01 pm HK News Desk ಕ್ರೈಂ
ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm