ಬ್ರೇಕಿಂಗ್ ನ್ಯೂಸ್
07-04-25 11:23 am Mangalore Correspondent ಕ್ರೈಂ
ಮಂಗಳೂರು, ಎ.7 : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಮುಸ್ಲಿಂ ಧರ್ಮಗುರು ಒಬ್ಬನನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ಸಂತ್ರಸ್ತ ಮಹಿಳೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ.
ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ತನ್ನ ಮನೆಗೆ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿಯ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿಯ ಮನೆಗೆ ಹೋಗಿದ್ದರು. ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಬಳಿಕ ಆಕೆಗೆ ಚಿಕಿತ್ಸೆಯ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಮತ್ತು ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ತಾನು ಹೆಜಮಾಡಿಗೆ ಹೋದಾಗಲೆಲ್ಲಾ, ತನ್ನಲ್ಲಿ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ಉಸ್ತಾದ್ ಹೇಳಿ ತನ್ನನ್ನು ವಂಚಿಸಿ ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Maulvi Arrested for Sexually Harassing Woman Under Guise of Black Magic Rituals. The arrested has been identified as G Abdul Kareem alias Kuloor Ustad, a resident of Guruvayanakere.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm