ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm