Gang Rape, Mangalore, Ullal, Crime: ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಉಳ್ಳಾಲದಲ್ಲಿ ಗ್ಯಾಂಗ್ ರೇಪ್ ಶಂಕೆ ; ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕ ಯುವತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ 

17-04-25 03:19 pm       Mangalore Correspondent   ಕ್ರೈಂ

ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ.

ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.

ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..