ಬ್ರೇಕಿಂಗ್ ನ್ಯೂಸ್
18-04-25 10:59 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕುತ್ತಾರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಶುಕ್ರವಾರ ಸರಕಾರಿ ರಜಾದಿನದ ಕಾರಣ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಕೂಚ್ ಬೆಹರ್ ಜಿಲ್ಲೆಯ ಹತ್ತೊಂಭತ್ತು ವರುಷದ ಯುವತಿಯೋರ್ವಳಿಗೆ ಕೆಲಸ ಕೊಡಿಸುವ ಅಮಿಷವೊಡ್ಡಿ ,ಆಕೆಗೆ ಮದ್ಯ ಕುಡಿಸಿ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯ ನದಿ ತೀರದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದಡಿ ಮೂವರು ಆರೋಪಿಗಳನ್ನ ಬಂಧಿಸಲಾಗಿತ್ತು.
ಆರೋಪಿಗಳಾದ ಆಟೋ ರಿಕ್ಷಾ ಚಾಲಕ ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯಕಾಡು ನಿವಾಸಿ ಪ್ರಭುರಾಜ್ (38), ಪೈಂಟರ್ ಕಮ್ ಎಲೆಕ್ಟ್ರೀಷಿಯನ್ ಕೆಲಸದ ಕುಂಪಲ ಚಿತ್ರಾಂಜಲಿ ನಗರ ನಿವಾಸಿ ಮಿಥುನ್ (37), ಡೆಲಿವರಿ ಬಾಯ್ ಆಗಿರುವ ಪಡೀಲ್ ಕೊಡಕ್ಕಲ್ ನಿವಾಸಿ ಮನೀಶ್ (30) ಎಂಬವರನ್ನು ಶುಕ್ರವಾರ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ.
ಉಳ್ಳಾಲ ಪೊಲೀಸರು ಕಸ್ಟಡಿಯಲ್ಲಿರುವ ಆರೋಪಿಗಳನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಹೆಚ್ಚಿನ ವಿಚಾರಣೆ ನಡೆಸಿ ಶನಿವಾರ ಸ್ಥಳ ಮಹಜರು ನಡೆಸುವ ಸಾಧ್ಯತೆಗಳಿವೆ. ಸಂತ್ರಸ್ತ ಪಶ್ಚಿಮ ಬಂಗಾಳ ಮೂಲದ ಯುವತಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ವೈದ್ಯಕೀಯ ವರದಿ ಬಂದ ನಂತರವೇ ಅತ್ಯಾಚಾರ ಕೃತ್ಯ ಸಾಬೀತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಕುಂಪಲ ನಿವಾಸಿ ಮಿಥುನ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣವೊಂದಿದ್ದರೆ, ಹೆಣ್ಣು ಪೀಡನೆ ಸಂಬಂಧಿತ ಪ್ರಕರಣಗಳಲ್ಲಿ ಹಲವು ಬಾರಿ ಉಳ್ಳಾಲ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದನೆನ್ನಲಾಗಿದೆ.
ಗೂಗಲ್ ಪೇಯಿಂದ ಸಿಕ್ಕಿಬಿದ್ದ ಆರೋಪಿಗಳು
ಕೇರಳದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಂತ್ರಸ್ತ ಯುವತಿ ತನ್ನ ಪ್ರಿಯಕರನೊಂದಿಗೆ ಗಲಾಟೆ ಮಾಡಿ ಬುಧವಾರ ಕೆಲಸ ಅರಸಿ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದಳು. ರೈಲ್ವೇ ನಿಲ್ದಾಣದಲ್ಲಿ ಸಂತ್ರಸ್ತೆಯ ಸ್ನೇಹ ಸಂಪಾದಿಸಿದ ಆರೋಪಿ ರಿಕ್ಷಾ ಚಾಲಕ ಪ್ರಭುರಾಜ್ ಆಕೆಯ ಮೊಬೈಲ್ ರಿಪೇರಿ ಮಾಡಿಸಿದ್ದ. ಯುವತಿ ಈ ವೇಳೆ ಪಶ್ಚಿಮ ಬಂಗಾಳದಲ್ಲಿರುವ ತನ್ನ ಸಹೋದರಿಗೆ ಕರೆ ಮಾಡಿದ್ದಳು. ಯುವತಿಯ ಮೊಬೈಲಲ್ಲಿ ಗೂಗಲ್ ಪೇ ಆ್ಯಪ್ ಇಲ್ಲದ ಕಾರಣ ಪಶ್ಚಿಮ ಬಂಗಾಳದ ಸಹೋದರಿಯು ಆರೋಪಿ ರಿಕ್ಷಾ ಚಾಲಕನ ಗೂಗಲ್ ಪೇ ಖಾತೆಗೆ 2000 ರೂಪಾಯಿ ಕಳಿಸಿ, ತನ್ನ ಸೋದರಿಯನ್ನ ಪಶ್ಚಿಮ ಬಂಗಾಳದ ರೈಲು ಹತ್ತಿಸುವಂತೆ ಕೋರಿದ್ದರು. ಆದರೆ ಪ್ರಭುರಾಜ್ ಯುವತಿಗೆ ರೊಟ್ಟಿ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ತನ್ನ ಸ್ನೇಹಿತರ ಜೊತೆ ಸೇರಿ ಯುವತಿಯನ್ನ ದುರ್ಬಳಕೆ ಮಾಡಿದ್ದ. ಗೂಗಲ್ ಪೇ ನಂಬರಿನ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಸುಲಭದಲ್ಲಿ ಹೆಡೆಮುರಿ ಕಟ್ಟಿದ್ದಾರೆ.
The Mangalore police successfully apprehended the suspects involved in the recent gang rape incident in Ullal. The Mangaluru City police on Thursday, April 17, arrested three persons who are suspected to have gang raped a 20-year-old woman hailing from West Bengal.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm