ಬ್ರೇಕಿಂಗ್ ನ್ಯೂಸ್
20-04-25 10:52 pm Bangalore Correspondent ಕ್ರೈಂ
ಬೆಂಗಳೂರು, ಎ.20 : ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ, ಪಂಜಾಬ್ ಮೂಲದ ಮಾಜಿ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರನ್ನು ಹೆಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಲಾಗಿದೆ.
ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ರೀತಿಯಲ್ಲಿ ಮನೆಯ ನೆಲ ಅಂತಸ್ತಿನಲ್ಲಿ ಮೃತದೇಹ ಪತ್ತೆಯಾಗಿದೆ. ಸಂಜೆ ನಾಲ್ಕು ಗಂಟೆ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಮನೆಯ ಗೋಡೆಗಳಲ್ಲಿ ರಕ್ತಸಿಕ್ತ ಕಲೆಗಳು ಪತ್ತೆಯಾಗಿವೆ. ಹಾಗಾಗಿ, ಓಂಪ್ರಕಾಶ್ ಸಾವಿಗೂ ಮುನ್ನ ಸಾಕಷ್ಟು ಒದ್ದಾಟ ನಡೆಸಿರುವ ಶಂಕೆಯಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂದರ್ಭ ಮನೆಯಲ್ಲಿ ಓಂ ಪ್ರಕಾಶ್ ಸೇರಿದಂತೆ ಮನೆ ಸದಸ್ಯರು ಮೂವರು ಮಾತ್ರ ಇದ್ದರು. ಅಲ್ಲಿದ್ದವರೇ ಒಬ್ಬರು ಹತ್ಯೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಟ್ಟಡವನ್ನು ಪೊಲೀಸ್ ಸುಪರ್ದಿಗೆ ಪಡೆದಿದ್ದೇವೆ. ಸದ್ಯ ಓಂ ಪ್ರಕಾಶ್ ಮಗನಿಂದ ದೂರು ಪಡೆದು ಎಫ್ಐಆರ್ ದಾಖಲಿಸುತ್ತಿದ್ದು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಬಿಹಾರದ ಚಂಪಾರಣ್ ಮೂಲದವರಾಗಿದ್ದ ಓಂ ಪ್ರಕಾಶ್ 1981ರ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕ ಗೃಹ ರಕ್ಷಕದಳ, ಅಗ್ನಿಶಾಮಕ ದಳಗಳಲ್ಲಿ ಡಿಜಿಪಿ ಆಗಿದ್ದ ಅವರು, 2015ರಿಂದ 2017ರ ವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಹೆಂಡತಿ ಕೈವಾಡ ಶಂಕೆ
ಓಂಪ್ರಕಾಶ್ ಕೊಲೆ ಪ್ರಕರಣದಲ್ಲಿ ಅವರ ಹೆಂಡತಿ ಬಗ್ಗೆಯೇ ಅನುಮಾನ ವ್ಯಕ್ತವಾಗಿದೆ. ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹದ ಬಗ್ಗೆ ಮಾಹಿತಿ ಲಭಿಸಿದೆ. ಓಂ ಪ್ರಕಾಶ್ ಹಾಗೂ ಅವರ ಪತ್ನಿ ನಡುವಿನ ಜಗಳದ ಬಗ್ಗೆ ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ತಿಳಿದಿತ್ತು. ಕೆಲವು ದಿನಗಳಿಂದ ಜಗಳ ತಾರಕಕ್ಕೇರಿ ಮನೆಯಲ್ಲಿ ದೊಡ್ಡ ರಾದ್ಧಾಂತವೇ ನಡೆದಿತ್ತು ಎನ್ನಲಾಗಿದೆ. ಓಂ ಪ್ರಕಾಶ್ ತಮ್ಮ ಸಹೋದರಿ ಹೆಸರಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಪತ್ನಿ ಗಂಡನ ಜೊತೆಗೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.
ನಾನು ಅವರನ್ನು ಮುಗಿಸಿದ್ದೇನೆ !
'I have finished the monster' (ನಾನು ದೈತ್ಯನನ್ನು ಮುಗಿಸಿದ್ದೇನೆ) ಎಂದು ಗಂಡನ ಕೊಲೆಯ ಬಳಿಕ ಪತ್ನಿಯೇ ಸ್ಟೇಟಸ್ ಹಾಕ್ಕೊಂಡಿರುವುದು ಭಾರೀ ಶಂಕೆಗೀಡು ಮಾಡಿದೆ. ಸದ್ಯ ಓಂಪ್ರಕಾಶ್ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Former Karnataka State Police Chief and 1981 batch IPS officer Om Prakash, 68, was allegedly killed by his wife Pallavi at their residence in H. S. R. Layout in Bengaluru Sunday (April 20) evening. In a dramatic turn of events, Sunday (April 20, 2025) evening, Ms. Pallavi reportedly made a video call to the wife of another retired IPS officer from the State, whom she was close to, and claimed she had killed “the monster”.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am