ಬ್ರೇಕಿಂಗ್ ನ್ಯೂಸ್
18-05-25 07:35 pm HK News Desk ಕ್ರೈಂ
ಮಂಗಳೂರು, ಮೇ 18: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಎಂಬ ಮಹಿಳೆಯ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶ್ವೇತಾ ಪೂಜಾರಿ ತನ್ನ ಫೇಸ್ಬುಕ್ ಖಾತೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಸುರತ್ಕಲ್ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶಾಂತಾ ರಾವ್ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಇದರಂತೆ, ಸುರತ್ಕಲ್ ಠಾಣೆಯಲ್ಲಿ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಿಂದು – ಮುಸ್ಲಿಂ ದ್ವೇಷಕ್ಕೆ ಪ್ರಚೋದನೆ ನೀಡುವಂತೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದು, ಆರೋಪಿತ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣವನ್ನು ಸಿಇಎನ್ ಠಾಣೆಗೆ ಹಸ್ತಾಂತರಿಸಿದ್ದು, ವಿಚಾರಣೆ ಮುಂದುವರಿಸಲಾಗಿದೆ.
A case has been registered against former BJP corporator Shweta Poojari following a provocative social media post linked to the ongoing Suhas Shetty case. The post allegedly contained abusive and defamatory remarks against the District In-charge Minister, which have been deemed inflammatory and in violation of legal norms.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm