ಬ್ರೇಕಿಂಗ್ ನ್ಯೂಸ್
01-06-25 07:56 pm HK News Desk ಕ್ರೈಂ
ಬೆಳಗಾವಿ, ಜೂನ್ 1 : ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಹೇಳಿಕೆ ನೀಡಿದ್ದು ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದರು. ಒಬ್ಬನ ಮೂಲಕ ಇನ್ನಿತರ ಯುವಕರು ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಮಾಡಿದ್ದ ಆರೋಪಿಗಳು ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಕರೆದಿದ್ದಾರೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾರೆ.
ಯುವಕರು ಆನಂತರ ಮತ್ತೆ ಬೇರೊಂದು ಜಾಗಕ್ಕೆ ಬಾಲಕಿಯನ್ನ ಕರೆದಿದ್ದಾರೆ. ಭಯದಿಂದ ಮತ್ತೆ ಬಾಲಕಿ ಹೋದಾಗ ಮೂರು ಜನರಿಂದ ಅತ್ಯಾಚಾರ ಆಗಿದೆ. ಘಟನೆ ಬಗ್ಗೆ ತಂದೆ ತಾಯಿಗೆ ಬಾಲಕಿ ವಿಚಾರ ಹೇಳಿರಲಿಲ್ಲ. ಆಬಳಿಕವೂ ಕರೆ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಬಾರದಿದ್ರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡು ಬಾಲಕಿ ಪೋಷಕರ ಗಮನಕ್ಕೆ ತಂದಿದ್ದಾಳೆ. ನಿನ್ನೆ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾದ 24 ಗಂಟೆಯಲ್ಲಿ ಐದು ಜನ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರು ಆರೋಪಿ ಬಾಲಾಪರಾಧಿ ಇದ್ದಾರೆ. ಇನ್ನೋರ್ವ ಆರೋಪಿ ಬಂಧನಕ್ಕೂ ಶೋಧ ನಡೆಸುತ್ತಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಘಟನೆ ನಡೆದಿತ್ತು. ಅದಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧನ ಮಾಡಿದ್ದರು.
A 15-year-old girl was allegedly abducted by six youngsters in Belagavi and was subjected to repeated sexual assault. The accused reportedly filmed the crime and used the video to blackmail the girl, continuing to exploit her over time.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm