ಬ್ರೇಕಿಂಗ್ ನ್ಯೂಸ್
21-12-20 09:34 pm Dilip : Bengaluru Correspondent ಕ್ರೈಂ
ಗುವಾಹತಿ, ಡಿ.21: ಬೆಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ದಾಖಲಾತಿಗಾಗಿ ಆಗಮಿಸಿದ್ದ ಅಸ್ಸಾಂ ರಾಜ್ಯದ ಬರ್ಪೇಟ ಜಿಲ್ಲೆಯ ಹೌಲಿ ಎಂಬ ಪಟ್ಟಣದ 20 ವರ್ಷದ ವಿದ್ಯಾರ್ಥಿನಿಯ ಶಂಕಾಸ್ಪದ ಸಾವಿನ ಪ್ರಕರಣ ಆಕೆಯ ಹುಟ್ಟೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕಾರಣವಾಗಿದೆ. ಶುಕ್ರವಾರ ರಾತ್ರಿ ಆಕೆಯ ಅಂತ್ಯಕ್ರಿಯೆ ನಡೆದ ನಂತರ ಹೌಲಿ ಪಟ್ಟಣದ ನೂರಾರು ಜನರು ಪ್ರತಿಭಟನೆ ನಡೆಸಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಬೆಂಗಳೂರು ಪೊಲೀಸರು ಪ್ರಕರಣದ ಕೂಲಕಂಕಷ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಅಸ್ಸಾಂ ಮೂಲದ ಯುವತಿ ಬೆಂಗಳೂರಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಅನೀಸುರ್ ರೆಹಮಾನ್ ನಿವಾಸದಲ್ಲಿ ಶಂಕಾಸ್ಪದವಾಗಿ ಸಾವಿಗೀಡಾಗಿದ್ದಳು. ಅಸ್ಸಾಂ ಮೂಲದವನೇ ಆಗಿರುವ 21 ವರ್ಷದ ಅನೀಸುರ್ ರೆಹಮಾನ್ ನನ್ನು ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದಾರೆ.


ಸಂತ್ರಸ್ತೆಯ ತಂದೆ ಅಸ್ಸಾಂನಲ್ಲಿ ಸರಕಾರಿ ಆಸ್ಪತ್ರೆಯೊಂದರ ಲ್ಯಾಬ್ ಟೆಕ್ನೀಷಿಯನ್ ಆಗಿದ್ದಾರೆ. ಉತ್ತಮ ಶಿಕ್ಷಣಕ್ಕಾಗಿ ಮಗಳು ಬೆಂಗಳೂರಿಗೆ ತೆರಳಿದ್ದಳು. ಆದರೆ, ಆಕೆ ಇಲ್ಲಿ ಬಂದ ಕೂಡಲೇ ಹೇಗೆ ಸಾವನ್ನಪ್ಪಿದ್ದಾಳೆ ಎಂಬ ಬಗ್ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಸಮಗ್ರ ತನಿಖೆ ನಡೆಸಬೇಕೆಂದು ಆಕೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಊರಿನ ಜನ ಆಗ್ರಹಿಸುತ್ತಿದ್ದಾರೆ.
ಅನೀಸುರ್ ರೆಹಮಾನ್ ಇದ್ದ ಬಾಡಿಗೆ ಮನೆಯ ಮಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿ ಪ್ರಜ್ಞಾಹೀನಳಾಗಿ ಬಿದ್ದಿರುವುದು ಹಾಗೂ ಆಕೆಯ ಜನನಾಂಗದ ಭಾಗದಲ್ಲಿ ರಕ್ತಸ್ರಾವವಾಗುತ್ತಿದ್ದುದನ್ನು ಗಮನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವಾಗಿದೆಯೇ ಎಂಬುದು ದೃಢಪಟ್ಟಿಲ್ಲ. ಪೋಸ್ಟ್ ಮಾರ್ಟಂ ವರದಿ ಬಳಿಕವೇ ಏನಾಗಿದೆ ಎನ್ನುವುದು ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಯುವತಿ ಶಂಕಾಸ್ಪದ ಸಾವಿನ ಹಿನ್ನೆಲೆಯಲ್ಲಿ ಅಸ್ಸಾಂ ರಾಜ್ಯದ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಖ್ ಹಾಗೂ ಎಐಯುಡಿಎಫ್ ಸಂಸದ ಬದ್ರುದ್ದೀನ್ ಅಜ್ಮಲ್, ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
A group of residents and students' organisations, on Friday, took out a massive candlelight march in Howly in Assam's Barpeta district, the hometown of a 20-year-old nursing student in Bengaluru who was allegedly murdered in the city on Wednesday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am