ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am