ಬ್ರೇಕಿಂಗ್ ನ್ಯೂಸ್
29-06-25 11:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 29 : ಓಎಲ್ ಎಕ್ಸ್ ಏಪ್ ನಲ್ಲಿ ಕಾರು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ಹಣ ಪಡೆದು ವಂಚನೆ ಎಸಗುತ್ತಿದ್ದ ಬನವಾಸಿ ಮೂಲದ ವ್ಯಕ್ತಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ ಸೊರಬಾ ರಸ್ತೆ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ(29) ಬಂಧಿತ.
ಓಎಲ್ಎಕ್ಸ್ ನಲ್ಲಿ ಕಾರು ಇದೆಯೆಂದು ತೋರಿಸಿ, ಮಾರಾಟ ಮಾಡುವ ನೆಪದಲ್ಲಿ ಮಂಗಳೂರಿನ ವ್ಯಕ್ತಿಯಿಂದ 2.50 ಲಕ್ಷ ಪಡೆದು ವಂಚನೆ ಎಸಗಿದ್ದ ಕುರಿತು ಮಂಗಳೂರಿನ ಸೆನ್ ಕ್ರೈಂ ಠಾಣೆಯಲ್ಲಿ ಜೂನ್ 28ರಂದು ಪ್ರಕರಣ ದಾಖಲಾಗಿತ್ತು.
ಪೊಲೀಸರು ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡಿದ ಆರೋಪಿ ಜಾಡು ಹಿಡಿಯಲು ಮುಂದಾಗಿದ್ದರು. ಈ ವೇಳೆ, ಆರೋಪಿ ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದು, ಅಲ್ಲಿಯೇ ಬೇರೆ ಕರ್ತವ್ಯದ್ದಲ್ಲಿದ್ದ ಸೆನ್ ಪೊಲೀಸರ ತಂಡವನ್ನು ಹೊಸಪೇಟೆಗೆ ಕಳುಹಿಸಿ ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ತನಿಖೆಯ ವೇಳೆ ಆರೋಪಿ ಮಂಜುನಾಥ್ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 21 ಬ್ಯಾಂಕ್ ಖಾತೆಗಳನ್ನು ಹೊಂದಿರುವುದಲ್ಲದೆ, ಎಂಟು ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡಿದ್ದು ಕಂಡು ಬಂದಿರುತ್ತದೆ. ಆತ ಬಳಸುತ್ತಿದ್ದ 8 ಮೊಬೈಲ್ ನಂಬ್ರಗಳ ಮೇಲೆ 80ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿತ ಕಳೆದ ಮೂರು ವರ್ಷಗಳಿಂದ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲ್ ನಂಬರನ್ನು ಕೆಲವು ದಿನಗಳ ಮಟ್ಟಿಗೆ ಬಳಸಿದ ಬಳಿಕ ಮಾರಾಟ ಮಾಡುತ್ತಿದ್ದ. ಆನಂತರ, ಹೊಸ ಸಿಮ್ ಗಳನ್ನು ಉಪಯೋಗಿಸುತ್ತಿದ್ದ. ಇದರಿಂದಾಗಿ ಕೇಸು ದಾಖಲಾದರೂ, ಸಿಕ್ಕಿಬೀಳದೆ ಚಾಣಾಕ್ಷತನ ಮೆರೆದಿದ್ದ.
ಸದ್ರಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಿರುತ್ತಾರೆ.
In a major breakthrough, Mangaluru CEN Crime Police have arrested a notorious cyber fraudster who scammed people by pretending to sell cars on OLX, a popular online marketplace. The accused, identified as Ravichandra Manjunath Revannakar (29), hails from Banavasi in Uttara Kannada district, near the government hospital on Soraba Road.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm