ಬ್ರೇಕಿಂಗ್ ನ್ಯೂಸ್
03-07-25 11:03 pm Mangalore Correspondent ಕ್ರೈಂ
ಪುತ್ತೂರು, ಜುಲೈ 3 : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು ಇದೇ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಫೋನಾಯಿಸಿ ದೂರು ಹೇಳಿದ್ದಾರೆ.

ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ಎಷ್ಟೇ ಖರ್ಚಾಗಲಿ ಸಂತ್ರಸ್ತೆಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು. ಇಲ್ಲೀವರೆಗೆ ಸಂತ್ರಸ್ತೆಗೆ ಒಬ್ಬರು ತಾಯಿ ಇದ್ದರು. ಇನ್ಮೇಲೆ ನಾನು ಕೂಡ ತಾಯಿ. ಸಂತ್ರಸ್ತೆ ಕುಟುಂಬದ ಖರ್ಚು ವೆಚ್ಚವನ್ನೆಲ್ಲ ನಾನು ಭರಿಸುತ್ತೇನೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ಮಾಡುತ್ತೇನೆ. ಸಂತ್ರಸ್ತೆ ಕುಟುಂಬದ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸ ನನ್ನದು ಎಂದರು.
ಸಂತ್ರಸ್ತೆ ತಾಯಿ ಜೊತೆ ಮಾತನಾಡುವ ವೇಳೆ ನಿಮ್ಮ ಜೊತೆ ನಾನಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ, ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ, ‘ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ, ಇವತ್ತಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು ಎಂದು ಹೇಳಿ ಸಂತ್ರಸ್ತೆ ತಾಯಿ ಮುಖಕ್ಕೆ ಹಾಕಿದ್ದ ಮಾಸ್ಕ್ ಅನ್ನು ಪ್ರತಿಭಾ ಕುಳಾಯಿ ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಯಾವುದೇ ಕಾರಣಕ್ಕೂ ಮಹಿಳೆಯಾದವಳು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಟ ಮಾಡಬೇಕು ಎಂದರು.
ಇದೇ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಜೊತೆ ಸಂತ್ರಸ್ತೆಯ ತಾಯಿ ನಮಿತಾ ಫೋನಲ್ಲಿ ಮಾತನಾಡಿದರು. ಈ ವೇಳೆ ನ್ಯಾಯ ದೊರಕಿಸಿ ಕೊಡುವಂತೆ ಸಂತ್ರಸ್ತೆಯ ತಾಯಿ ನಮಿತಾ ಕೇಳಿಕೊಂಡರು. ಫೋನ್ ಸಂಭಾಷಣೆಯಲ್ಲಿ ಧೈರ್ಯ ಹೇಳಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
The Karnataka State Women’s Commission chairperson Nagalakshmi Chaudhary personally intervened by calling the victim—who is pregnant after being abandoned by the son of BJP leader Jagannivas Rao—and assured her of support and justice.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am