ಬ್ರೇಕಿಂಗ್ ನ್ಯೂಸ್
04-07-25 06:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದೇಶದಲ್ಲಿದ್ದ ರಹಿಮಾನ್ ಕತಾರ್ ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಎನ್ಐಎ ಬಲೆಗೆ ಕೆಡವಿದೆ.
ಇದೇ ಎಪ್ರಿಲ್ ತಿಂಗಳಲ್ಲಿ ಅಬ್ದುಲ್ ರಹಿಮಾನ್ ಸೇರಿದಂತೆ ಮೂವರು ತಲೆಮರೆಸಿಕೊಂಡಿದ್ದವರು ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿಯ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಪ್ರಕಟಿಸಿತ್ತು. ಅಬ್ದುಲ್ ರಹಿಮಾನ್ ಹೆಸರಲ್ಲಿ ನಾಲ್ಕು ಲಕ್ಷ ಬಹುಮಾನ ಘೋಷಣೆಯಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಎನ್ಐಎ ಬಂಧನ ಮಾಡುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಬ್ದುಲ್ ರಹಿಮಾನ್, ಸದ್ದಿಲ್ಲದೆ ವಿದೇಶಕ್ಕೆ ಹಾರಿದ್ದ.
ಈ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎ ಲುಕೌಟ್ ನೋಟಿಸ್ ಜಾರಿ ಮಾಡಿತ್ತು. ಇದೀಗ ಕತಾರ್ ಏರ್ಪೋರ್ಟ್ ನಿಂದ ನೇರ ವಿಮಾನದಲ್ಲಿ ಕೇರಳದ ಕಣ್ಣೂರಿಗೆ ಬಂದಿಳಿಯುತ್ತಿದ್ದಾಗಲೇ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು, ಅಲ್ಲಿಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆಯಂತೆ ಅಬ್ದುಲ್ ರಹಿಮಾನ್ ಮತ್ತು ಇತರರು ಸೇರಿ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು. ಪ್ರಕರಣದಲ್ಲಿ ಒಟ್ಟು 28 ಮಂದಿಯ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯಪಡಿಸುವುದು ಮತ್ತು ಸಮಾಜದಲ್ಲಿ ಕೋಮು ದ್ವೇಷದ ಗಲಾಟೆ ಎಬ್ಬಿಸುವ ಉದ್ದೇಶದಿಂದ ಕೊಲೆ ನಡೆಸಲಾಗಿತ್ತು ಎಂದು ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿತ್ತು.
In a major breakthrough in the Praveen Nettaru murder case, the National Investigation Agency (NIA) has arrested one of the key accused, Abdul Rahiman, who had been absconding abroad for nearly two years. He was taken into custody by NIA officials at Kerala’s Kannur International Airport upon his arrival from Qatar.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am