ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm