ಬ್ರೇಕಿಂಗ್ ನ್ಯೂಸ್
15-07-25 06:52 pm Bangalore Correspondent ಕ್ರೈಂ
ಬೆಂಗಳೂರು, ಜು 15 : ಡಾನ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಕರೆ ಮಾಡಿ ಬೆದರಿಸಿದ್ದ ನಾಲ್ವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ ದೇವ್ ಹಾಗೂ ಅಮಿತ್ ಚೌಧರಿ ಬಂಧಿತರು. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು. 'ಇಲ್ಲವಾದರೆ ನಿನ್ನ ಮಗನನ್ನು ಕಿಡ್ನಾಪ್ ಮಾಡುತ್ತೇವೆ' ಎಂದು ಬೆದರಿಸಿದ್ದರು. ಉದ್ಯಮಿಯ ಪುತ್ರ ನೀಡಿದ ದೂರಿನನ್ವಯ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆಗಾಗಿ ಕೇಂದ್ರ ವಿಭಾಗ ಮತ್ತು ಸಿಸಿಬಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡವನ್ನ ರಚಿಸಿದ್ದರು. ಅದರಂತೆ ಪ್ರಕರಣದ ತನಿಖೆ ಕೈಗೊಂಡ ತಂಡ ಜೆ.ಸಿ ರಸ್ತೆಯಲ್ಲಿ ಕಾರ್ ಸೌಂಡ್ ಆಕ್ಸೆಸರೀಸ್‌ಗಳನ್ನ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ರಫೀಕ್‌ನನ್ನ ಬಂಧಿಸಿದ್ದರು. ಆತ ನೀಡಿದ ಮಾಹಿತಿಯನ್ವಯ ಉತ್ತರ ಪ್ರದೇಶದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಷ್ಣೋಯ್ ಗ್ಯಾಂಗ್‌ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ:
ಪ್ರಕರಣವೊಂದರಲ್ಲಿ ದೆಹಲಿ ಪೊಲೀಸರಿಂದ ಬಂಧನವಾಗಿದ್ದ ಮೊಹಮ್ಮದ್ ರಫೀಕ್, ಕೆಲಕಾಲ ತಿಹಾರ್ ಜೈಲಿನಲ್ಲಿ ಕಳೆದಿದ್ದ. ಆ ಸಂದರ್ಭದಲ್ಲಿ ಉತ್ತರ ಪ್ರದೇಶ ಮೂಲದ ಉಳಿದ ಮೂವರು ಆರೋಪಿಗಳ ಪರಿಚಯವಾಗಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತೀಕಾರಕ್ಕಾಗಿ ಕೃತ್ಯ:
ಪ್ರಕರಣದ ದೂರುದಾರ ಉದ್ಯಮಿ ಹಾಗೂ ಇತರೆ ಮೂವರು ವ್ಯಕ್ತಿಗಳು ಸೇರಿ, ತನಗೆ ಸೈಟ್ ಹಾಗೂ ಕಾರು ಅಕ್ಸೆಸರೀಸ್‌ಗಳಲ್ಲಿನ ವ್ಯವಹಾರದಲ್ಲಿ ಮೋಸ ಮಾಡಿದ್ದರು. ಆದ್ದರಿಂದ ಬೆದರಿಕೆವೊಡ್ಡಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಉತ್ತರ ಪ್ರದೇಶದ ಇನ್ನೂ ಮೂವರು ಆರೋಪಿಗಳನ್ನ ಕರೆಯಿಸಿಕೊಂಡು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಗಳು ಕೃತ್ಯ ಎಸಗಲು ಪಿಸ್ತೂಲ್ ಮತ್ತು ಗುಂಡುಗಳೊಂದಿಗೆ ಬೆಂಗಳೂರಿಗೆ ಬಂದಿದ್ದೆವೆಂದು ತಿಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನ ವಶಪಡಿಸಿಕೊಳ್ಳುವುದು ಬಾಕಿ ಇದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a dramatic turn of events, Bengaluru police have arrested four individuals who impersonated members of the notorious Lawrence Bishnoi gang and attempted to extort ₹1 crore from a local businessman. The accused were nabbed by the Sheshadripuram Police following a swift investigation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm