ಬ್ರೇಕಿಂಗ್ ನ್ಯೂಸ್
27-07-25 03:26 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.27: ಕೌಟುಂಬಿಕ ವಿಚಾರಕ್ಕೆ ಚಿಕ್ಕಪ್ಪನೇ ತನ್ನ ಸಹೋದರನ ಇಬ್ಬರು ಪುತ್ರರನ್ನು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ.
ಕಮ್ಮಸಂದ್ರ ನಿವಾಸಿಗಳಾದ ಮೊಹಮ್ಮದ್ ಇಶಾಕ್ (9), ಮೊಹಮ್ಮದ್ ಜುನೈದ್(6) ಮೃತಪ್ಪಟಿದ್ದು, ರೋಹನ್ (4) ಮಗು ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೃತ್ಯ ಎಸಗಿದ ಖಾಸೀಂ (35) ಎಂಬಾತನನ್ನು ಬಂಧಿಸಲಾಗಿದೆ.
ಯಾದಗಿರಿ ಜಿಲ್ಲೆ ಮೂಲದ ಚಾಂದ್ಪಾಷಾ ತನ್ನ ಪತ್ನಿ ರೈನಾ ಮತ್ತು ಮೂವರು ಮಕ್ಕಳು ಹಾಗೂ ತಾಯಿ, ತಮ್ಮನ ಜತೆ ಕಮ್ಮಸಂದ್ರದಲ್ಲಿ ವಾಸವಾಗಿದ್ದ. ಚಾಂದ್ಪಾಷಾ ಗಾರೆ ಕೆಲಸ ಮಾಡಿಕೊಂಡಿದ್ದು, ಪತ್ನಿ ರೈನಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ಲು. ಈ ಮಧ್ಯೆ ಕುಡಿತ ಚಟಕ್ಕೆ ಬಿದಿದ್ದ ತಮ್ಮ ಖಾಸೀಂ ಸರಿಯಾಗಿ ಊಟ ಹಾಕುವುದಿಲ್ಲ ಎಂದು ಚಾಂದ್ಪಾಷಾ ಮತ್ತು ಅತ್ತಿಗೆ ರೈನಾಳನ್ನ ನಿಂದಿಸುತ್ತಿದ್ದ. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ಚಾಂದ್ಪಾಷಾ ದಂಪತಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಆರೋಪಿ ಮನೆಯಲ್ಲಿದ್ದ ಮೂವರು ಮಕ್ಕಳಿಗೆ ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಕೂಗಾಟ ಹೊರಗಡೆ ಕೇಳಬಾರದು ಎಂದು ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕ್ರೌರ್ಯ ಮೆರೆದು ಪರಾರಿಯಾಗಿದ್ದ.
ಕೆಲ ಹೊತ್ತಿನ ಬಳಿಕ ಸ್ಥಳೀಯರು ಗಮನಿಸಿ ಚಾಂದ್ಪಾಷಾ ದಂಪತಿಗೆ ತಿಳಿಸಿದ್ದಾರೆ. ಬಳಿಕ ಸ್ಥಳೀಯರೇ ಮನೆಯ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತೂಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ರೋಹನ್ನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಖಾಸೀಂನನ್ನು ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು ಕಳೆದ ತಿಂಗಳು ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್ ಪಾಷಾ ಹುಡುಕಿ ಕರೆತಂದಿದ್ದ. ಘಟನಾ ಸ್ಥಳಕ್ಕೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಎಂ.ನಾರಾಯಣ್, ಎಸಿಪಿ ಸತೀಶ್, ಇನ್ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.
ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಕ್ಕಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಾನೆ. ಮಕ್ಕಳ ಬಾಯಿಗೆ ಬಟ್ಟೆ ತುರುಕಿ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಘಟನೆಗೆ ಕಾರಣ ತಿಳಿಯುತ್ತಿಲ್ಲ ಎಂದು ಚಾಂದ್ ಪಾಷ, ಮೃತ ಮಕ್ಕಳ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತನ್ನದಲ್ಲದ ತಪ್ಪಿಗೆ ಅಮಾಯಕ ಮಕ್ಕಳು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥ ಎನ್ನುತ್ತಿದ್ದು, ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮಾಡಲಾಗುತ್ತಿದೆ.
In a gruesome case of domestic violence, a man brutally attacked and killed his two young nephews and seriously injured a third in the Kammasandra area under Hebbagodi Police Station limits. The horrific incident has sent shockwaves across the locality.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm