ಬ್ರೇಕಿಂಗ್ ನ್ಯೂಸ್
07-08-25 08:59 pm Bangalore Correspondent ಕ್ರೈಂ
ಬೆಂಗಳೂರು, ಆ.7: ಸೈಬರ್ ಖದೀಮರು ಪೊಲೀಸರ ಸೋಗಿನಲ್ಲಿ ವೃದ್ಧ ವ್ಯಕ್ತಿಯನ್ನು ಒಂದು ವಾರ ಕಾಲ ಡಿಜಿಟಲ್ ಬಂಧನದಲ್ಲಿಟ್ಟು ಬರೋಬ್ಬರಿ 1.77 ಕೋಟಿ ರೂ. ಲಪಟಾಯಿಸಿದ್ದಾರೆ. ವಂಚನೆಗೆ ಒಳಗಾದ ಜಿ.ವಸಂತ್ ಕುಮಾರ್ (81) ಎಂಬವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದಾನಂದ ನಗರ ಬಳಿಯ ಎನ್ಜಿಇಎಫ್ ಲೇಔಟ್ ನಿವಾಸಿಯಾದ ವಸಂತ್ಕುಮಾರ್ ಅವರಿಗೆ ಸಂದೀಪ್ ಜಾಧವ್ ಎಂಬಾತ ಜುಲೈ 5ರಂದು ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿದ್ದ. ತಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಬ್ಯಾಂಕ್ ಖಾತೆ ತೆರೆಯಲಾಗಿದೆ. ಜೆಟ್ ಏರ್ವೇಸ್ನ ನರೇಶ್ ಗೋಯಲ್ ಎಂಬಾತನ ಹೆಸರಿಗೆ ತಮ್ಮ ಬ್ಯಾಂಕ್ ಖಾತೆಯಿಂದ ಹಣದ ಅಕ್ರಮ ವರ್ಗಾವಣೆಯಾಗಿದೆ ಎಂದು ವಸಂತ್ ಕುಮಾರ್ ಅವರನ್ನು ಹೆದರಿಸಿದ್ದ. ಬಳಿಕ ಕೆಲ ವ್ಯಕ್ತಿಗಳು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಸಂತ್ ಕುಮಾರ್ ಅವರಿಗೆ ಕರೆ ಮಾಡಿ, ಜುಲೈ 9ರಿಂದ 15ರ ವರೆಗೆ ಡಿಜಿಟಲ್ ಅರೆಸ್ಟ್ ಎಂದು ಹೇಳಿ ಹೆದರಿಸಿದ್ದರು. ಅಲ್ಲದೆ, ವಾಟ್ಸಾಪ್ ವಿಡಿಯೊ ಕರೆಯ ಮೂಲಕ ನಕಲಿ ಬಂಧನ ವಾರಂಟ್ ತೋರಿಸಿ ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನದ ವಾರಂಟ್ ನೋಡಿ ಭಯಬಿದ್ದ ವಸಂತ್ ಕುಮಾರ್, ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ವಂಚಕರಿಗೆ ಕೊಟ್ಟುಬಿಟ್ಟಿದ್ದರು. ನಂತರ ವಂಚಕರು, ತನಿಖೆ ಉದ್ದೇಶಕ್ಕೆ ತಮ್ಮ ಖಾತೆಯಲ್ಲಿನ ಹಣವನ್ನು ಬೇರೊಂದು ಖಾತೆಗೆ ವರ್ಗಾಯಿಸಬೇಕೆಂದು ವಸಂತ್ ಅವರಿಗೆ ಸೂಚಿಸಿದ್ದರು. ಹೀಗಾಗಿ, ವಸಂತ್ ಕುಮಾರ್ ತಮ್ಮ ಬ್ಯಾಂಕ್ ಖಾತೆಯಿಂದ ವಂಚಕರು ಸೂಚಿಸಿದ ಖಾತೆಗಳಿಗೆ ಹಂತ ಹಂತವಾಗಿ ಆರ್ಟಿಜಿಎಸ್ ಮೂಲಕ 1.77 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ವಂಚಕರು ಅವರ ಸಂಪರ್ಕಕ್ಕೆ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
In a recent case of cybercrime, an 81-year-old retired man from Bengaluru has been a victim of a growing digital arrest scam. He has lost Rs 1.77 crore to fraudsters who tricked him with a fake “digital arrest” over 10 days. The senior citizen, who lives in Sadananda Nagar (NGEF Layout), filed a complaint with the East CEN police on July 23 after realising he had been scammed.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm