ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm