ಬ್ರೇಕಿಂಗ್ ನ್ಯೂಸ್
30-08-25 03:22 pm Mangalore Correspondent ಕ್ರೈಂ
ಮಂಗಳೂರು, ಆ.30 : ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಬಜ್ಜೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. 2024ರ ಡಿ.18ರಂದು ಬೆಳಗ್ಗೆ 6 ಗಂಟೆಗೆ ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 3.30ರ ವೇಳೆಗೆ ಆಕೆ ಮಗುವನ್ನು ಪಕ್ಕದ ಮತ್ತೊಂದು ಮನೆಯಲ್ಲಿ ಬಿಟ್ಟು ಶಾಲೆಗೆ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ತಂದೆ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದ.
ರಾತ್ರಿ ಮನೆಗೆ ಬಂದ ತಾಯಿ ಮಗುವಿನ ಗುಪ್ತಾಂಗದ ಮೇಲಾದ ಗಾಯ ನೋಡಿ ಮಗುವಿನ ಬಳಿ ಕೇಳಿದಾಗ ಮಗು ನಡೆದ ವಿಷಯ ತಿಳಿಸಿತ್ತು. ಮರುದಿನ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್ಸ್ಪೆಕ್ಟರ್ ಸಂದೀಪ್ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಮನು ಅಪರಾಧಿಗೆ ಪೋಕ್ಸೋ ಕಲಂ 10ರಡಿ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಪರಿಹಾರವಾಗಿ ದಂಡದ 20 ಸಾವಿರ ರೂ. ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 30 ಸಾವಿರ ರೂ. ಪರಿಹಾರ ಮೊತ್ತ ಸೇರಿ ಒಟ್ಟು 50 ಸಾವಿರ ರೂ. ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.
In a shocking case of child sexual abuse, a 34-year-old man from Bajpe has been sentenced to five years of rigorous imprisonment and a fine of ₹20,000 by the Additional District and Sessions Court for sexually assaulting his three-and-a-half-year-old daughter.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm